ಅಮ್ಮಾ... ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಅಮ್ಮಾ... ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ಪಾರ್ಟ್-ಟೈಮ್ ಆಗಿ ಯೂಟ್ಯೂಬ್‌ನಲ್ಲಿ ಲೈಫ್‌ಸ್ಟೈಲ್ ಮತ್ತು ವೈಯಕ್ತಿಕ ವೀಡಿಯೊಗಳನ್ನು ರಚಿಸಿ ಅಪ್‌ಲೋಡ್ ಮಾಡುತ್ತಿದ್ದಳು.
Published on

ಹೈದರಾಬಾದ್: ಬಿಎಸ್‌ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಬೋನು ಕೋಮಲಿ (21) ಸೋಮವಾರ ತನ್ನ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆ ಸಾವಿಗೂ ಮೊದಲು ಕುವೈತ್‌ನಲ್ಲಿರುವ ತನ್ನ ತಾಯಿಗೆ ‘ಐ ಲವ್ ಯೂ ಸೋ ಮಚ್ ಅಮ್ಮ’ ಎಂದು ಸಂದೇಶ ಕಳುಹಿಸಿದ್ದರು ಎಂದು ವರದಿಯಾಗಿದೆ.

ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ತನ್ನ ತಾಯಿಗೆ ‘ಐ ಲವ್ ಯು ಸೋ ಮಚ್’ ಎಂದು ಮೆಸೇಜ್ ಮಾಡಿದ್ದಳು ಎಂಬ ವಿಚಾರ ಬೆಳಕಿಗೆ ಬಂದಿದೆ. ಆಂಧ್ರ ಮೂಲದ ಕೋಮಲಿ ಕಳೆದ 11 ತಿಂಗಳಿಂದ ಹೈದರಾಬಾದ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಳು. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ಪಾರ್ಟ್-ಟೈಮ್ ಆಗಿ ಯೂಟ್ಯೂಬ್‌ನಲ್ಲಿ ಲೈಫ್‌ಸ್ಟೈಲ್ ಮತ್ತು ವೈಯಕ್ತಿಕ ವೀಡಿಯೊಗಳನ್ನು ರಚಿಸಿ ಅಪ್‌ಲೋಡ್ ಮಾಡುತ್ತಿದ್ದಳು.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ.. ಕೋಮಲಿ ಸೋಮವಾರ ಮುಂಜಾನೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತನ್ನ ತಾಯಿ ಬಿ. ಸತ್ಯ ವರಲಕ್ಷ್ಮಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದಾಳೆ. ಐ ಲವ್ ಯು ಮಮ್ಮಿ ಸೋ ಮಚ್.. ತಮ್ಮನನ್ನು ಚೆನ್ನಾಗಿ ನೋಡಿಕೋ ಎಂದು ಸಂದೇಶ ಕಳುಹಿಸಿದ್ದಳು. ತದನಂತರ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ನೇಹಿತ ಫ್ಲಾಟ್‌ಗೆ ಹೋಗಿ ಎಷ್ಟೇ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿಲ್ಲ. ಕೊನೆಗೆ ಬಾಗಿಲಿನ ಒಡೆದು ಒಳನುಗ್ಗಿ ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಇದಕ್ಕೂ ಮೊದಲು ಕೋಮಲಿ ಅವರು ಸುಮಾರು 6 ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಅಮ್ಮಾ... ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ
ಶಿವಮೊಗ್ಗ: ಪೊಲೀಸ್ ಪೇದೆ ಕಿರುಕುಳ; ಪತಿ ಮೃತಪಟ್ಟ ವಾರಕ್ಕೆ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com