ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ಗೆ ರಾಜ್ಯಸಭೆ ಟಿಕೆಟ್ ಘೋಷಣೆ

ಮಾರ್ಚ್ 16 ರಂದು ರಾಜ್ಯ ಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ 37 ಶಾಸಕರ ಬೆಂಬಲ ಬೇಕಿದೆ. ಆದರೆ ಪಕ್ಷವು ಪ್ರಸ್ತುತ 40 ಶಾಸಕರನ್ನು ಹೊಂದಿರುವುದರಿಂದ ಪಾರ್ಥ್ ಪವಾರ್ ಗೆಲುವು ನಿರೀಕ್ಷಿತವಾಗಿದೆ.
Ajit pawar And parth pawar
ಅಜಿತ್ ಪವಾರ್ ಮತ್ತು ಪಾರ್ಥ್ ಪವಾರ್
Updated on

ಮುಂಬಯಿ: ವಿಮಾನ ದುರಂತದಲ್ಲಿ ಮೃತಪಟ್ಟ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ಅಜಿತ್ ಪವಾರ್ ಮಗ ಪಾರ್ಥ ಪವಾರ್ ಅವರಿಗೆ ಎನ್‌ಸಿಪಿ ರಾಜ್ಯಸಭೆ ಟಿಕೆಟ್ ನೀಡಿದೆ.

ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಪಾರ್ಥ ಪವಾರ್(35) ಹೆಸರನ್ನು ಘೋಷಣೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಪಾರ್ಥ ಹೆಸರು ಘೋಷಣೆ ಮಾಡಲಾಗಿದೆ.

ಮಾರ್ಚ್ 16 ರಂದು ರಾಜ್ಯ ಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ 37 ಶಾಸಕರ ಬೆಂಬಲ ಬೇಕಿದೆ. ಆದರೆ ಪಕ್ಷವು ಪ್ರಸ್ತುತ 40 ಶಾಸಕರನ್ನು ಹೊಂದಿರುವುದರಿಂದ ಪಾರ್ಥ್ ಪವಾರ್ ಗೆಲುವು ನಿರೀಕ್ಷಿತವಾಗಿದೆ. ಪಾರ್ಥ್ ಪವಾರ್ ಆರು ವರ್ಷಗಳ ಕಾಲ ರಾಜ್ಯ ಸಭಾ ಸದಸ್ಯತ್ವ ಪಡೆಯಲಿದ್ದಾರೆ.

ರಾಜಕೀಯದಲ್ಲಿ ಆಸಕ್ತಿ ಹೊಂದಿರುವ ಪಾರ್ಥ, 2019ರ ಲೋಕಸಭೆ ಚುನಾವಣೆಯಲ್ಲಿ ಮಾವಲ್ ಕ್ಷೇತ್ರದಿಂದ ಸ್ಪರ್ಧಿಸಿ ಅವಿಭಜಿತ ಶಿವಸೇನಾ ಅಭ್ಯರ್ಥಿ ಶ್ರೀರಂಗ ಬರ್ನೆ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದರು.

Ajit pawar And parth pawar
ಅಜಿತ್ ಪವಾರ್ ವಿಮಾನ ಪತನ: ತನಿಖೆ ಮುಗಿಯುವವರೆಗೆ ವಿಮಾನಯಾನ ಸಚಿವರನ್ನು ವಜಾಗೊಳಿಸಿ - ಮೋದಿಗೆ ರೋಹಿತ್ ಪವಾರ್ ಪತ್ರ

ಪಾರ್ಥ್ ಪವಾರ್ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಪಕ್ಷದ ಪ್ರಮುಖ ನಾಯಕರು ಸರ್ವಾನುಮತದಿಂದ ತೆಗೆದುಕೊಂಡಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ, ಇದರಲ್ಲಿ ಛಗನ್ ಭುಜಬಲ್, ಸುನಿಲ್ ತತ್ಕರೆ, ಹಸನ್ ಮುಶ್ರಿಫ್, ಧನಂಜಯ್ ಮುಂಡೆ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರಂತಹ ಹಿರಿಯ ನಾಯಕರು ಸೇರಿದ್ದಾರೆ ಎಂದು IANS ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com