ಯುಎಸ್-ವೆನೆಜುವೆಲಾ ಸಮಸ್ಯೆ ಬಗ್ಗೆ ಮೌನಮುರಿದ ಭಾರತ: ವಿದೇಶಾಂಗ ಇಲಾಖೆ ಹೇಳಿದ್ದೇನು?

ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.
Venezuelan President Nicolas Maduro gives a press conference in Caracas, Venezuela
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ
Updated on

ನವದೆಹಲಿ: ವೆನೆಜುವೆಲಾ ದೇಶದ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿ ವಿಷಯ ಎಂದು ಭಾರತ ಹೇಳಿದೆ. ಅಮೆರಿಕವು ತೈಲ ಸಮೃದ್ಧ ದೇಶದ ಮೇಲೆ ದಾಳಿ ಮಾಡಿ ಅಲ್ಲಿನ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಮಿಲಿಟರಿ ಕಾರ್ಯಾಚರಣೆಯಲ್ಲಿ ಅಪಹರಿಸಿದ ನಂತರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮವಿಸುತ್ತಿದ್ದೇವೆ ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯವು ನೀಡಿದ ಹೇಳಿಕೆಯಲ್ಲಿ, ಭಾರತವು ವೆನೆಜುವೆಲಾ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದೆ. ಎಲ್ಲಾ ಸಂಬಂಧಪಟ್ಟ ಪಕ್ಷಗಳು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸಲು ಕರೆ ನೀಡಿದೆ ಎಂದು ಹೇಳಿದೆ.

ಪ್ರದೇಶದ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಮಾತುಕತೆ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ ಎಂದು ಹೇಳಿಕೆ ತಿಳಿಸಿದೆ.

ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ಕಳವಳ ವಿಷಯವಾಗಿದೆ. ನಾವು ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವೆನೆಜುವೆಲಾದ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗೆ ಭಾರತ ತನ್ನ ಬೆಂಬಲವನ್ನು ಪುನರುಚ್ಚರಿಸುತ್ತದೆ. ಪ್ರದೇಶದ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಮಾತುಕತೆ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ ಎಂದು ಹೇಳಿಕೆ ತಿಳಿಸಿದೆ.

ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ವಿದೇಶಾಂಗ ಸಚಿವಾಲಯವು ತನ್ನ ಆರಂಭಿಕ ಪ್ರತಿಕ್ರಿಯೆಯಲ್ಲಿ ಸಾರ್ವಭೌಮತ್ವದ ಉಲ್ಲಂಘನೆಗಳ ಬಗ್ಗೆ ಯಾವುದೇ ನೇರ ಉಲ್ಲೇಖವನ್ನು ನೀಡಲಿಲ್ಲ ಅಥವಾ ಯುನೈಟೆಡ್ ಸ್ಟೇಟ್ಸ್ ನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ, ವೇಗವಾಗಿ ನಡೆಯುತ್ತಿರುವ ಘಟನೆಗಳ ನಡುವೆ ಸೂಕ್ಷ್ಮವಾಗಿ ಹೇಳಿಕೆ ನೀಡುತ್ತಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಯುನೈಟೆಡ್ ಸ್ಟೇಟ್ಸ್ ಆಡಳಿತವು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡ ಮಿಲಿಟರಿ ಕಾರ್ಯಾಚರಣೆಯ ನಂತರ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ನ್ಯೂಯಾರ್ಕ್ ಗೆ ಕರೆತಂದಿದೆ ಎಂದು ಘೋಷಿಸಿದ ನಂತರ ಈ ಹೇಳಿಕೆ ಬಂದಿದೆ.

Venezuelan President Nicolas Maduro gives a press conference in Caracas, Venezuela
ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ; ಮೊದಲ Video ಬಿಡುಗಡೆ: ಇದಕ್ಕೆಲ್ಲಾ 'ಆಯಿಲ್ ಮಾಫಿಯಾ' ಕಾರಣನಾ? ಏನಿದು ಟ್ರಂಪ್ ಪ್ಲಾನ್!

ಮಾದಕ-ಭಯೋತ್ಪಾದನೆ ಎಂದು ಕರೆದಿದ್ದರ ಮೇಲೆ ವ್ಯಾಪಕವಾದ ಶಿಸ್ತುಕ್ರಮದ ಭಾಗವಾಗಿ ಈ ಕಾರ್ಯಾಚರಣೆ ಎಂದು ಅಮೆರಿಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ವೆನೆಜುವೆಲಾದಲ್ಲಿ ಅಧಿಕಾರದ ಪರಿವರ್ತನೆ ಆಗುವವರೆಗೆ ಯುನೈಟೆಡ್ ಸ್ಟೇಟ್ಸ್ ದೇಶದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಗಳು ವೆನೆಜುವೆಲಾವನ್ನು ಸುತ್ತುವರೆದಿರುವ ದೀರ್ಘಕಾಲೀನ ರಾಜಕೀಯ ಮತ್ತು ರಾಜತಾಂತ್ರಿಕ ಬಿಕ್ಕಟ್ಟಿನಲ್ಲಿ ತೀವ್ರ ಏರಿಕೆಯನ್ನು ಗುರುತಿಸಿವೆ.

ಅನಿಶ್ಚಿತತೆಯ ನಡುವೆ, ಭಾರತವು ತನ್ನ ಪ್ರಜೆಗಳಿಗೆ ಸುರಕ್ಷತೆಯಿಂದ ಇರುವಂತೆ ಕರೆ ನೀಡಿದೆ. ಭಾರತೀಯ ನಾಗರಿಕರು ವೆನೆಜುವೆಲಾ ತೀರಾ ಅನಿವಾರ್ಯವಿದ್ದರೆ ಮಾತ್ರ ಪ್ರಯಾಣಿಸಿ ಎಂದು ಸಲಹೆ ನೀಡಿದೆ. ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಪ್ರಜೆಗಳು ವೆನೆಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸೂಚಿಸಲಾಗಿದೆ ಎಂದು ಸಲಹೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com