

ನವದೆಹಲಿ: ಜಿಮ್ ಮಾಲೀಕತ್ವ ವಿಚಾರವಾಗಿ ಗಲಾಟೆಯಿಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ಮಾಡಿ, ಆತನ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿ, ಮಕ್ಕಳನ್ನು ಬೀದಿಯಲ್ಲಿ ವಿವಸ್ತ್ರಗೊಳಿಸಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿಯೊಬ್ಬನನ್ನು ಬಂಧಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆ.
ಜನವರಿ 2 ರಂದು ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ದೂರುದಾರರು ಹಾಗೂ ಆತನ ಕುಟುಂಬ ಸದಸ್ಯರು ಗಾಯಗೊಂಡಿರುವುದನ್ನು ನೋಡಿದ್ದೇವು. ಬಳಿಕ ಅವರನ್ನು ಚಿಕಿತ್ಸೆಗಾಗಿ ಹೆಡಗೇವಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಂತ್ರಸ್ತರ ಒಡೆತನದ ಜಿಮ್‌ನಲ್ಲಿ ಕೇರ್‌ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಸತೀಶ್ ಎನ್ನಲಾದ ಆರೋಪಿಯನ್ನು ಬಂಧಿಸಲಾಗಿದೆ.
ಇತರರು ತಲೆಮರೆಸಿಕೊಂಡಿದ್ದಾರೆ. ಸತೀಶ್ ದಂಪತಿಗೆ ಮೋಸ ಮಾಡಿ ಜಿಮ್‌ನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಗಲಾಟೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ ನಾಲ್ವರು ಒಬ್ಬ ವ್ಯಕ್ತಿಯನ್ನು ಹೊಡೆಯುವುದು, ಬಟ್ಟೆ ಬಿಚ್ಚಿ ಕಪಾಳಕ್ಕೆ ಹೊಡೆಯುವ ದೃಶ್ಯವಿದೆ. ಅವರಲ್ಲಿ ಒಬ್ಬ ವ್ಯಕ್ತಿ ಶೂನಲ್ಲಿ ಹೊಡೆಯುತ್ತಿದ್ದರೆ ಅನೇಕ ಮಂದಿ ಘಟನೆಯನ್ನು ನೋಡುತ್ತಿದ್ದರೂ ಏನು ಮಾಡುತ್ತಿಲ್ಲ. ಸ್ಥಳಕ್ಕೆ ಬರುವ ಇಬ್ಬರು ಪೊಲೀಸರು, ಆರೋಪಿಗಳನ್ನು ಸ್ಥಳದಲ್ಲಿದ್ದರೂ ಸಂತ್ರಸ್ತನ ಭುಜಕ್ಕೆ ಕೈ ಹಾಕಿ ಹಿಡಿಯುವ ದೃಶ್ಯ ವಿಡಿಯೋದಲ್ಲಿದೆ.
ವೈದ್ಯಕೀಯ ಚಿಕಿತ್ಸೆ ಬಳಿಕ ದೂರುದಾರರು ಹಾಗೂ ಅವರ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು ಹೇಳಿಕೆ ನೀಡಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ, ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿದ್ದು, ಆರೋಪಿಗಳ ಪಾತ್ರದ ಕುರಿತು ತಿಳಿದಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಇತರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement