

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿಎಚ್‌ಪಿ ಪಿಎಫ್‌ಐಯಂತೆ ಎಂದು ಹೋಲಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಹೆಚ್ ಪಿ ಕಾರ್ಯಕರ್ತ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತನಿಖೆಗೆ ಮುಂಬೈ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.
ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದ ವಿಹೆಚ್ ಪಿ ಕಾರ್ಯಕರ್ತನ ದೂರಿಗೆ ಸಂಬಂಧಿಸಿದಂತೆ ಫೆಬ್ರವರಿ 17 ರೊಳಗೆ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಲು ಭಾಂಡಪ್ ಪೊಲೀಸರಿಗೆ ಸೂಚಿಸಿದೆ.
ಕರ್ನಾಟಕ ಕಾಂಗ್ರೆಸ್‌ನ ಈ ಪ್ರಣಾಳಿಕೆಯನ್ನು ಮೇ 2, 2023 ರಂದು ಬಿಡುಗಡೆ ಮಾಡಿತ್ತು.
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು 2023ರಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಕಾಂಗ್ರೆಸ್ ಹೇಳಿತ್ತು.
Advertisement