

ಶ್ರೀಕಾಕುಳಂ: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದ್ದು ವಿಡಿಯೊ ವೈರಲ್ ಆಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕೊರ್ಲಂ ಗ್ರಾಮದ ಬಳಿಯ ಬರುವಾ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.
Advertisement