ರಾಜಸ್ಥಾನ: ಎಸ್‌ಐ ಸೇರಿ ಮೂವರು ಪೊಲೀಸರಿಂದ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ; ಕೇಸ್ ದಾಖಲು

ಮಹಿಳಾ ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಪೊಲೀಸರು ಸಿದ್ಧ್‌ಮುಖ್ ಪೊಲೀಸ್ ಠಾಣೆಯಲ್ಲಿ ಮೂವರು ಪೊಲೀಸರು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Three cops, including SI, booked for allegedly raping woman constable in Rajasthan's Churu
ಸಾಂದರ್ಭಿಕ ಚಿತ್ರ
Updated on

ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಾಗೂ ಮೂವರು ಪೊಲೀಸರು ಸೇರಿದಂತೆ ನಾಲ್ವರು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಇದ್ಧ್‌ಮುಖ್ ಎಸ್‌ಎಚ್‌ಒ ಇಮ್ರಾನ್ ಖಾನ್ ಅವರ ಪ್ರಕಾರ, ಮಹಿಳಾ ಕಾನ್‌ಸ್ಟೆಬಲ್ ಚುರು ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ದೂರಿನಲ್ಲಿ, 2017 ರಲ್ಲಿ ಸರ್ದಾರ್ಶಹರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಾಲ್ವರು ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳಾ ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಪೊಲೀಸರು ಸಿದ್ಧ್‌ಮುಖ್ ಪೊಲೀಸ್ ಠಾಣೆಯಲ್ಲಿ ಮೂವರು ಪೊಲೀಸರು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Three cops, including SI, booked for allegedly raping woman constable in Rajasthan's Churu
ಪಾಲ್ಘರ್‌: ಇನ್‌ಸ್ಟಾಗ್ರಾಮ್‌ ಗೆಳೆಯನ ನಂಬಿ ಓಡಿಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

ಆರೋಪಿಗಳಲ್ಲಿ ಸರ್ದಾರ್ ಶಹರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆಗಿದ್ದ ಸಬ್-ಇನ್ಸ್‌ಪೆಕ್ಟರ್ ಸುಭಾಷ್ ಕೂಡ ಸೇರಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದಾಗ ಅವರು ಠಾಣೆಯಲ್ಲಿ ಎಸ್‌ಎಚ್‌ಒ ಆಗಿದ್ದರು. ಇನ್ನಿಬ್ಬರು ಪೊಲೀಸರಾದ ರವೀಂದ್ರ ಮತ್ತು ಜೈವೀರ್ ಅವರನ್ನು ಠಾಣೆಯಲ್ಲಿ ಕಾನ್‌ಸ್ಟೆಬಲ್‌ಗಳಾಗಿ ನಿಯೋಜಿಸಲಾಗಿತ್ತು. ವಿಕ್ಕಿ ಎಂಬ ಮತ್ತೊಬ್ಬ ವ್ಯಕ್ತಿ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದಾರೆ.

ಸಂತ್ರಸ್ತೆ ಕಾನ್‌ಸ್ಟೆಬಲ್ ಅಶಿಸ್ತಿನ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಅತ್ಯಾಚಾರ ಆರೋಪದ ಬಗ್ಗೆ "ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ" ಎಂದು ಎಸ್‌ಎಚ್‌ಒ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com