Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಹಿಮಂತಾ ಬಿಸ್ವಾ ಶರ್ಮಾ ತಲೆಯಲ್ಲಿ ಟ್ಯೂಬ್ ಲೈಟ್ ಇದೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅದರಲ್ಲಿ ಏನು ಬರೆಯಲಾಗಿದೆ ಎಂದು ಅವರಿಗೆ ತಿಳಿದಿದೆಯೇ? ಎಂದು ಓವೈಸಿ ಪ್ರಶ್ನಿಸಿದ್ದಾರೆ.
AIMIM's Owaisi slams Himanta Biswa Sarma
ಓವೈಸಿ, ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ
Updated on

ನಾಗ್ಪುರ: ಹಿಜಾಬ್ ಧರಿಸಿದ ಮಹಿಳೆ ಒಂದು ದಿನ ಭಾರತದ ಪ್ರಧಾನಿಯಾಗುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಹಿಮಂತಾ ಬಿಸ್ವಾ ಶರ್ಮಾ ನಡುವಿನ ಭಾನುವಾರ ವಾಕ್ ಸಮರ ನಡೆದಿದೆ. ಅಸ್ಸಾಂ ಮುಖ್ಯಮಂತ್ರಿಯನ್ನು ಟ್ಯೂಬ್ ಲೈಟ್ ಎಂದು ಓವೈಸಿ ಕರೆದಿದ್ದು, ಅವರದು ಪಾಕಿಸ್ತಾನ ರೀತಿಯ ಮನಸ್ಥಿತಿ ಎಂದಿದ್ದಾರೆ.

ನಾಗ್ಪುರದಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಶರ್ಮಾ ಅವರಂತಹವರು ಸಂವಿಧಾನದ ಸ್ಫೂರ್ತಿಯನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಭಾರತವು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಸೇರಿಲ್ಲ. ಇದು ರಾಷ್ಟ್ರದ ಸೌಂದರ್ಯವಾಗಿದೆ ಎಂದು ಹೇಳಿದರು.

ಹಿಮಂತಾ ಬಿಸ್ವಾ ಶರ್ಮಾ ತಲೆಯಲ್ಲಿ ಟ್ಯೂಬ್ ಲೈಟ್ ಇದೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅದರಲ್ಲಿ ಏನು ಬರೆಯಲಾಗಿದೆ ಎಂದು ಅವರಿಗೆ ತಿಳಿದಿದೆಯೇ? ಎಂದು ಪ್ರಶ್ನಿಸಿದರು.

ಹಿಮಂತ ಬಿಸ್ವಾ ಶರ್ಮಾ ಅವರು ಪಾಕಿಸ್ತಾನದ ಮನಸ್ಥಿತಿಯನ್ನು ಹೊಂದಿದ್ದಾರೆ. ಪಾಕಿಸ್ತಾನದ ಸಂವಿಧಾನದಲ್ಲಿ, ಒಂದು ಸಮುದಾಯದ ಯಾರಾದರೂ ಮಾತ್ರ ದೇಶದ ಪ್ರಧಾನಿ ಅಥವಾ ಅಧ್ಯಕ್ಷರಾಗಬಹುದು" ಎಂದಿದೆ. ಆದರೆ, ಭಾರತದಲ್ಲಿ ದೇವರಲ್ಲಿ ನಂಬಿಕೆಯಿಲ್ಲದವರಿಗೂ ಸ್ಥಾನವಿದೆ. ಶರ್ಮಾ ಅವರದು ಸಂಕುಚಿತ ಮನೋಭಾವವಾಗಿದ್ದು, ಚಿಕ್ಕ ವಿಚಾರವನ್ನು ದೊಡ್ಡದು ಮಾಡುತ್ತಾರೆ ಎಂದು ಕಿಡಿಕಾರಿದರು.

ಏನಿದು ವಿವಾದ? ಹಿಜಾಬ್ ಧರಿಸಿದ ಮಹಿಳೆ ಒಂದು ದಿನ ಭಾರತದ ಪ್ರಧಾನಿಯಾಗುತ್ತಾರೆ ಎಂದು ಓವೈಸಿ ಶನಿವಾರ ಹೇಳಿದ್ದರು. ಪಾಕ್ ಸಂವಿಧಾನ ಒಂದೇ ಸಮುದಾಯಕ್ಕೆ ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ನಿರ್ಬಂಧಿಸುತ್ತದೆ. ಆದರೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ದೇಶದ ಸಂವಿಧಾನ ಪಾಕಿಸ್ತಾನದ ಸಂವಿಧಾನಕ್ಕಿಂತ ಭಿನ್ನವಾಗಿ ಎಲ್ಲಾ ಸಮುದಾಯಗಳ ಜನರಿಗೆ ಸಮಾನ ಸ್ಥಾನಮಾನವನ್ನು ನೀಡಿದೆ ಎಂದು ಹೇಳಿದ್ದರು.

AIMIM's Owaisi slams Himanta Biswa Sarma
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬಂದೇ ಬರುತ್ತೆ: ಓವೈಸಿ

ನಂತರ ಶರ್ಮಾ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಭಾರತ ಹಿಂದೂ ನಾಗರಿಕತೆಯನ್ನು ಹೊಂದಿರುವ ಹಿಂದೂ ರಾಷ್ಟ್ರವಾಗಿದೆ ಮತ್ತು ಭಾರತದ ಪ್ರಧಾನಿ ಯಾವಾಗಲೂ ಹಿಂದೂ ಆಗಿರುತ್ತಾರೆ ಎಂದು ನಾವು ಬಲವಾಗಿ ನಂಬುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com