

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಜನವರಿ 12 ರಂದು ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತನಗೆ ನೀಡಿರುವ ಸಮನ್ಸ್‌ಗೆ ಅನುಗುಣವಾಗಿ ವಿಜಯ್ ಅವರು ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗಾಗಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಅವರು ಸೋಮವಾರ ಬೆಳಿಗ್ಗೆ 7 ಗಂಟೆಗೆ ಚೆನ್ನೈನಿಂದ ಚಾರ್ಟರ್ಡ್ ಫ್ಲೈಟ್ ಮೂಲಕ ನವದೆಹಲಿಗೆ ತೆರಳಲಿದ್ದು, ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.
ನಟ ಹಾಗೂ ರಾಜಕಾರಣಿಗೆ ಸಂಪೂರ್ಣ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರ ರಾಜಧಾನಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.
Advertisement