

ನವದೆಹಲಿ: ಉತ್ತರ ಪ್ರದೇಶದ ಮೀರತ್ ನ ಹಳ್ಳಿಯೊಂದರಲ್ಲಿ 22 ವರ್ಷದ ಯುವಕನೊಬ್ಬ ದಲಿತ ಮಹಿಳೆಯನ್ನು ಕೊಂದು ಆಕೆಯ ಮಗಳನ್ನು ಅಪಹರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟು ಮಾಡಿದ್ದು, ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಗುರುವಾರ ಸರ್ಧಾನ ಪ್ರದೇಶದ ಕಪ್ಸಾದ್ ಗ್ರಾಮದಿಂದ ಅಪಹರಿಸಲಾಗಿದ್ದ 20 ವರ್ಷದ ದಲಿತ ಮಹಿಳೆಯ ಮೃತದೇಹ ಸಹರಾನ್ ಪುರ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿತ್ತು. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಸರ್ಕಾರ, ಬಿಜೆಪಿ ಆಡಳಿತದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ದ್ವೇಷ ಹೆಚ್ಚಾಗುತ್ತಿದೆ ಎಂದು ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಾಲ್ ಗೌತಮ್, ದೇಶದಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಹೆಚ್ಚಿಸಲಾಗುತ್ತಿದೆ ಮತ್ತು ಇದು ಬಿಜೆಪಿ ಸರ್ಕಾರದ ನೆರವಿನಲ್ಲಿಯೇ ನಡೆಯುತ್ತಿದೆ ಎಂದು ಕಿಡಿಕಾರಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳನ್ನು ತುಳಿಯಲು ಸಂಪನ್ಮೂಲಗಳನ್ನು ಬಹಿರಂಗವಾಗಿ ಬಳಸುತ್ತಿದ್ದಾರೆ. ಮುಖ್ಯಮಂತ್ರಿ ಯೋಗಿ ಅವರ ಬುಲ್ಡೋಜರ್ ಸಾಮಾನ್ಯವಾಗಿ ಜಾತಿ, ಧರ್ಮದ ಆಧಾರದ ಮೇಲೆಯೇ ನಡೆಯುತ್ತಿದೆ. ರಾಜ್ಯದಲ್ಲಿ ದಲಿತರು ತುಳಿತಕ್ಕೊಳಗಾದಾಗ ಅವರ ಬುಲ್ಡೋಜರ್ ಚಲಿಸುವುದಿಲ್ಲ ಎಂದು ಹೇಳಿದ್ದಾರೆ.
Advertisement