

ರಾಂಚಿ: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ರಾಜ್ಯದಲ್ಲಿ ಭಾನುವಾರ ಲತೇಹರ್ ಜಿಲ್ಲೆಯಲ್ಲಿ ನಡೆದಿದೆ
ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಿಂದ ಲತೇಹಾರ್‌ನ ಮಹುವದಂರ್ ನಲ್ಲಿ ಆಯೋಜಿಸಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಪಲ್ಟಿಯಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಗೌರವ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಗಾಯಗೊಂಡ 60 ಮಂದಿಯನ್ನು ಮಹುವದನರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು 20 ಕ್ಕೂ ಹೆಚ್ಚು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಪಿನ್ ಕುಮಾರ್ ದುಬೆ ಹೇಳಿದ್ದಾರೆ. ಗಂಭೀರವಾಗಿರುವ ಮೂವತ್ತೆರಡು ಜನರನ್ನು ಉತ್ತಮ ಚಿಕಿತ್ಸೆಗಾಗಿ ರಾಂಚಿಯ RIMS ಗೆ ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Advertisement