

ತಿರುವನಂತಪುರ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಮಾಜಿ ಶಾಸಕ ಎಸ್ ರಾಜೇಂದ್ರನ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.
ಪಕ್ಷದ ರಾಜ್ಯ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಂದ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
ಇಡುಕ್ಕಿ ಜಿಲ್ಲೆಯ ಹಿರಿಯ ನಾಯಕರಾದ ರಾಜೇಂದ್ರನ್ ಅವರು 2006 ರಿಂದ 2021 ರವರೆಗೆ ದೇವಿಕುಲಂ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ ಮಾತನಾಡಿದ ರಾಜೇಂದ್ರನ್ ಕಳೆದ ನಾಲ್ಕೈದು ವರ್ಷಗಳಿಂದ ಪಕ್ಷ ರಾಜಕಾರಣದಲ್ಲಿ ಸಕ್ರಿಯವಾಗಿಲ್ಲದಿದ್ದರೂ ಸಾರ್ವಜನಿಕರ ನಡುವೆ ಕೆಲಸ ಮಾಡುತ್ತಿದ್ದೇನೆ ಎಂದರು.
ನನ್ನ ಜೀವನದುದ್ದಕ್ಕೂ ದ್ರೋಹ ಮಾಡಿಲ್ಲ. ನನ್ನ ಪಕ್ಷ ಅಥವಾ ಅದರ ಸಮಿತಿಗಳ ವಿರುದ್ಧ ನಾನು ಕೆಲಸ ಮಾಡಿದ್ದೇನೆ ಎಂಬ ಯಾವುದೇ ಆರೋಪಗಳಿಲ್ಲ. ಆಪ್ತರೊಂದಿಗೆ ಚರ್ಚಿಸಿ ಬಿಜೆಪಿ ಸೇರುವ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಿಲುವಿನಿಂದ ಪ್ರಭಾವಿತನಾಗಿ ಪಕ್ಷ ಸೇರುವ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದರು.
ಫೆಬ್ರವರಿ 8 ರಂದು ಮುನ್ನಾರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 100 ಜನರು ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
Advertisement