

ಚೆನ್ನೈ: ತಮಿಳು, ತೆಲುಗು, ಬೆಂಗಾಲಿ ಮತ್ತು ಮರಾಠಿ ಸೇರಿದಂತೆ ಹಿಂದಿಯೇತರ ಭಾಷೆಗಳ ಅತ್ಯುತ್ತಮ ಕೃತಿಗಳಿಗೆ ತಮಿಳುನಾಡು ಸರ್ಕಾರದಿಂದ ವಾರ್ಷಿಕ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭಾನುವಾರ ಪ್ರಕಟಿಸಿದ್ದಾರೆ.
ಈ ಪ್ರಶಸ್ತಿಯು ₹ 5 ಲಕ್ಷ ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದ್ದಾರೆ. ಇದಕ್ಕೆ Semmozhi Illakiya Virudhu (ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ) ಎಂದು ಹೆಸರಿಡಲಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳ ಅತ್ಯುತ್ತಮ ಕೃತಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಚೆನ್ನೈ ಅಂತಾರಾಷ್ಟ್ರೀಯ ಪುಸ್ತಕ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಎಂ. ಸ್ಟಾಲಿನ್, ಈ ವಿಷಯ ತಿಳಿಸಿದರು.
ಕೇಂದ್ರ ಸಂಸ್ಕೃತಿ ಸಚಿವಾಲಯದ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯನ್ನು ರದ್ದುಗೊಳಿಸಲಾಗಿದೆ. ಕಲೆ ಮತ್ತು ಸಾಹಿತ್ಯ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪಗಳು ಅಪಾಯಕಾರಿ ಎಂದು ಹೇಳಿದರು.
ಇಂತಹ ಸಂದರ್ಭಗಳಲ್ಲಿ ಸೂಕ್ತ, ರಚನಾತ್ಮಕ, ಪ್ರತಿಕ್ರಿಯಾತ್ಮಕ ಯೋಜನೆಗಾಗಿ ಹಲವಾರು ಸಾಹಿತಿಗಳು ಮತ್ತು ಸಾಹಿತ್ಯ ಸಂಸ್ಥೆಗಳ ಪ್ರತಿನಿಧಿಗಳು ತಮ್ಮಲ್ಲಿ ಮನವಿ ಮಾಡಿದ್ದು, ಇದು ಇಂದಿನ ಅಗತ್ಯ ಎಂಬ ಅರಿವು ನಮಗೆ ಇದೆ. ನಿಮ್ಮೆಲ್ಲರಿಗೂ ಸಂತೋಷವನ್ನುಂಟು ಮಾಡುವ ಘೋಷಣೆಯನ್ನು ಮಾಡಲು ಬಯಸುತ್ತೇನೆ ಎಂದು ಹೇಳುವ ಮೂಲಕ ಈ ಪ್ರಶಸ್ತಿಯನ್ನು ಘೋಷಿಸಿದರು.
Advertisement