

ನಂದ್ಯಾಲ್: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವ ದಹನಕ್ಕೀಡಾದ ಘಟನೆ ನಡೆದಿದೆ. ಜಿಲ್ಲೆಯ ಶಿರವೆಲ್ಲಾ ಮಂಡಲದ ಶಿರವೆಲ್ಲಾಮೆಟ್ಟ ಗ್ರಾಮದ ಬಳಿ ನಸುಕಿನ ಜಾವ 1 ರಿಂದ 2 ಗಂಟೆಯ ಸುಮಾರಿಗೆ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಮತ್ತು ಕಂಟೇನರ್ ಲಾರಿ ಬೆಂಕಿಗೆ ಆಹುತಿಯಾಗಿವೆ.
ಬಸ್ಸಿನಿಂದ ಬೃಹತ್ ಜ್ವಾಲೆಗಳು ಹೊರಬರುತ್ತಿರುವ ದೃಶ್ಯದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಕಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ವಾಹನಗಳ ಚಾಲಕರು ಮತ್ತು ಕಂಟೇನರ್ ಟ್ರಕ್‌ನ ಕ್ಲೀನರ್ ಇಬ್ಬರೂ ಸುಟ್ಟು ಕರಕಲಾದರು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ನೆಲ್ಲೂರಿನಿಂದ ಹೈದರಾಬಾದ್‌ಗೆ 36 ಪ್ರಯಾಣಿಕರೊಂದಿಗೆ ಬಸ್ ಪ್ರಯಾಣಿಸುತ್ತಿದ್ದಾಗ ಅದರ ಒಂದು ಟೈರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಟೈರ್ ಸ್ಫೋಟಗೊಂಡ ಕಾರಣ, ಬಸ್‌ನ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ವಿಭಜಕವನ್ನು ದಾಟಿ ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ.
ನೆಲ್ಲೂರಿನಿಂದ ಹೈದರಾಬಾದ್‌ಗೆ 36 ಪ್ರಯಾಣಿಕರೊಂದಿಗೆ ಬಸ್ ಪ್ರಯಾಣಿಸುತ್ತಿದ್ದಾಗ, ಅದರ ಒಂದು ಟೈರ್ ಸ್ಪೋಟಗೊಂಡಿತು. ಟೈರ್ ಸ್ಫೋಟಗೊಂಡ ಕಾರಣ, ಬಸ್‌ನ ಚಾಲಕ ನಿಯಂತ್ರಣ ಕಳೆದುಕೊಂಡು ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿತು, ಬೆಂಕಿ ಎರಡೂ ವಾಹನಗಳನ್ನು ಆವರಿಸಿಕೊಂಡಿತು. ಬಸ್‌ನ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ, ಕೆಲವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಬಸ್ ಚಾಲಕ, ಅದರ ಕ್ಲೀನರ್ ಮತ್ತು ಲಾರಿ ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇಂದು ಮಧ್ಯರಾತ್ರಿ ಸರಿಸುಮಾರು 1ರಿಂದ 2 ಗಂಟೆ ನಡುವೆ, ನೆಲ್ಲೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಗಂಭೀರ ಅಪಘಾತಕ್ಕೀಡಾಯಿತು. ಖಾಸಗಿ ಬಸ್‌ನ ಮುಂಭಾಗದ ಬಲಭಾಗದ ಟೈರ್ ಸ್ಫೋಟಗೊಂಡ ಪರಿಣಾಮವಾಗಿ ಬಸ್ ರಸ್ತೆ ವಿಭಜಕವನ್ನು ದಾಟಿ ರಸ್ತೆಯ ಎದುರು ಭಾಗಕ್ಕೆ ಚಲಿಸಿತು, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು ಎಂದು ನಂದ್ಯಾಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶಿಯೋರನ್ ಹೇಳಿದ್ದಾರೆ.
ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರನ್ನು ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರೂ ಸುರಕ್ಷಿತವಾಗಿ ಇಳಿಯಲು ಸಾಧ್ಯವಾಯಿತು ಎಂದು ಎಸ್ಪಿ ಹೇಳಿದರು. ಘಟನೆಯ ನಂತರ, ಸ್ಥಳೀಯರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಬಸ್ಸಿನ ಮುಂಭಾಗ ಮತ್ತು ತುರ್ತು ಬಾಗಿಲು ತೆರೆಯಲು ವಿಫಲವಾದ ಕಾರಣ, ಪ್ರಯಾಣಿಕರು ಸ್ವಲ್ಪ ಸಮಯದವರೆಗೆ ವಾಹನದೊಳಗೆ ಸಿಲುಕಿಕೊಂಡರು ಎಂದು ವರದಿಯಾಗಿದೆ.
ಬೆಂಕಿ ಹತ್ತಿ ಉರಿಯಲು ನಿಖರ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ. ಬೆಂಕಿ ನೇರವಾಗಿ ಡಿಕ್ಕಿಯಿಂದ ಉಂಟಾಗಿದೆಯೇ ಅಥವಾ ಬ್ಯಾಟರಿ ಸಂಬಂಧಿತ ಸಮಸ್ಯೆಗಳಿಂದ ಉಂಟಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ.
ಕರ್ನೂಲ್ ದುರಂತ
ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ ಕಳೆದ ಅಕ್ಟೋಬರ್ ನಲ್ಲಿ ಇದೇ ರೀತಿ ಬಸ್ ದುರಂತದಲ್ಲಿ 21 ಮಂದಿ ಸಜೀವ ದಹನಗೊಂಡಿದ್ದರು.
Advertisement