ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಜೈಶ್ ಭಯೋತ್ಪಾದಕನ ಹತ್ಯೆ

ಬಿಲ್ಲಾವರ್‌ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಶ್ರೇಣಿಯ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ಹೇಳಿದ್ದಾರೆ.
Jaish terrorist killed in encounter in Jammu and Kashmir's Kathua
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಶ್ರೇಣಿಯ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ಹೇಳಿದ್ದಾರೆ.

"ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಸೇನೆ ಮತ್ತು ಸಿಆರ್‌ಪಿಎಫ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಜೈಶ್ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದೆ" ಎಂದು ಜಮ್ಮು ಪೊಲೀಸ್ ಮುಖ್ಯಸ್ಥರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Jaish terrorist killed in encounter in Jammu and Kashmir's Kathua
ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video

ಹತ್ಯೆಯಾದ ಭಯೋತ್ಪಾದಕನನ್ನು ಜೆಇಎಂ ಕಮಾಂಡರ್ ಉಸ್ಮಾನ್ ಎಂದು ಅಧಿಕಾರಿಗಳು ಗುರುತಿಸಲಾಗಿದ್ದು, ಆತನಿಂದ ಎಂ 4 ಸ್ವಯಂಚಾಲಿತ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com