ಭುಗಿಲೆದ್ದ ಬಂಡಾಯ, ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಶಶಿತರೂರ್: ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ, ಪಕ್ಷದ ಚುನಾವಣಾ ಸಭೆಗೆ ಗೈರು!

ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Shashi Tharoor Upset With Rahul Gandhi
ಶಶಿತರೂರ್ ಮತ್ತು ರಾಹುಲ್ ಗಾಂಧಿ
Updated on

ನವದೆಹಲಿ: ಕಾಂಗ್ರೆಸ್ ಪಕ್ಷದ ರೆಬೆಲ್ ನಾಯಕ ಶಶಿತರೂರ್ ಮತ್ತೆ ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ಕಾಂಗ್ರೆಸ್ ಚುನಾವಣಾ ಸಭೆಯಿಂದ ದೂರ ಉಳಿದಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಹಲವು ತಿಂಗಳುಗಳಿಂದ ಪಕ್ಷ ಮತ್ತು ನಾಯಕತ್ವದ ವಿರುದ್ಧ ಅತೃಪ್ತಿ ಅಸಮಾಧಾನಗೊಂಡು ಅಂತರ ಕಾಪಾಡಿಕೊಂಡಿರುವ ಶಶಿ ತರೂರ್, ಬಿಜೆಪಿ ಜೊತೆ ಸಂಪರ್ಕ ಬೆಳಸಿಕೊಂಡಿದ್ದಾರೆ. ಈ ನಡುವೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ನಡುವೆಯೇ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ಸಭೆಗೆ ಗೈರು ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ್ದಾಗ "ಸರಿಯಾದ ಗೌರವ" ಸಿಗದ ಕಾರಣ ತರೂರ್ ಅಗೌರವ ಅನುಭವಿಸಿದ್ದಾರೆ. ರಾಹುಲ್ ಗಾಂಧಿಯವರ ಮಹಾಪಂಚಾಯತ್ ಸಮಯದಲ್ಲಿ ತಮ್ಮನ್ನು ನಡೆಸಿಕೊಂಡ ರೀತಿಗೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.

Shashi Tharoor Upset With Rahul Gandhi
ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯವಿದೆ: ಹಿರಿಯ ನಾಯಕ ಶಶಿತರೂರ್ ಅಭಿಮತ

ತರೂರ್ ಕೋಪಕ್ಕೆ ಇದೇನಾ ಕಾರಣ?

ಮಾಧ್ಯಮ ವರದಿಗಳ ಪ್ರಕಾರ, ಈ ಕಾರ್ಯಕ್ರಮದ ಸಮಯದಲ್ಲಿ, ರಾಹುಲ್ ಗಾಂಧಿ ಆಗಮಿಸುವ ಮೊದಲು ತಮ್ಮ ಭಾಷಣವನ್ನು ಮುಗಿಸಲು ಅವರನ್ನು ಕೇಳಲಾಯಿತು. ಇದನ್ನು ತರೂರ್ ಗೌರವದ ಕೊರತೆ ಎಂದು ಪರಿಗಣಿಸಿದ್ದಾರೆ. "ಸರಿಯಾದ ಗೌರವ" ಸಿಗದಿದ್ದಕ್ಕಾಗಿ ಅವರು ಪ್ರಸ್ತುತ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಇದು ತರೂರ್ ಅವರು ಪ್ರಮುಖ ಕಾಂಗ್ರೆಸ್ ಸಭೆಯಿಂದ ಹಿಂದೆ ಸರಿಯಲು ಕಾರಣವಾಗಿದೆ.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಕೇರಳ ಘಟಕದ ಹಿರಿಯ ಸದಸ್ಯರು ಮಧ್ಯಾಹ್ನ 2.30ಕ್ಕೆ ಸಭೆ ಸೇರಲಿದ್ದು ಈ ಸಭೆಗೆ ಶಶಿ ತರೂರ್ ಗೈರು ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ತಿರುವನಂತಪುರಂನಿಂದ ನಾಲ್ಕು ಬಾರಿ ಸಂಸದರಾಗಿರುವ ತರೂರ್ ಗೈರು ಹಾಜರಾಗಲಿರುವುದು ಕುತೂಹಲ ಕೆರಳಿಸಿದೆ. ಕೇರಳ ಮತ್ತು ಕೇಂದ್ರ ಕಾಂಗ್ರೆಸ್ ನಾಯಕರ ಜೊತೆ ಶಶಿ ತರೂರ್ ಅತೃಪ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ಸಂಬಂಧ ಕರೆದಿರುವ ಸಭೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗಿದೆ.

Shashi Tharoor Upset With Rahul Gandhi
'ಇದು ಭಯಾನಕ ನಿರ್ಧಾರ, ಅನಗತ್ಯ ರಾಜಕೀಯೀಕರಣ': ಬಿಸಿಸಿಐ ನಡೆ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕಿಡಿ!

ಅಸಮಾಧಾನಕ್ಕೆ ಪುಷ್ಠಿ

ರಾಜತಾಂತ್ರಿಕರಾಗಿರುವ ಶಶಿ ತರೂರ್, ಪ್ರಧಾನಿ ಮತ್ತು ಆಡಳಿತಾರೂಢ ಬಿಜೆಪಿಯನ್ನು ಹೊಗಳಿದಂತೆ ಕಾಣುವ ಕಾಮೆಂಟ್‌ಗಳ ನಂತರ ಕಾಂಗ್ರೆಸ್‌ನ ಕೇಂದ್ರ ನಾಯಕತ್ವದ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎನ್ನುವುದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ.

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಪಾಕಿಸ್ತಾನದ ಮೇಲಿನ ಮಿಲಿಟರಿ ದಾಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿ ಪಕ್ಷದ ನಾಯಕತ್ವದ ಕೆಂಗಣ್ಣಿಗೆ ಗುರಿಯಾಗಿದ್ದರು. ಶಶಿ ತರೂರ್ ಮತ್ತು ಕಾಂಗ್ರೆಸ್ ನಡುವಿನ ಉದ್ವಿಗ್ನತೆ ಭುಗಿಲೆದ್ದಿದ್ದು, ಭಾರತೀಯ ಜನತಾ ಪಕ್ಷವು ತನ್ನ ಬದ್ಧ ವೈರಿಯನ್ನು ಅಣಕಿಸಲು ಆಗಾಗ್ಗೆ ಇದರ ಮೇಲೆ ದಾಳಿ ಮಾಡುತ್ತಿದೆ.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಮತ್ತು ಪ್ರಸ್ತುತ ಭಾರತ ಪುರುಷರ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ ಅವರೊಂದಿಗೆ ಸೆಲ್ಫಿ ಪೋಸ್ಟ್ ಮಾಡಿದ್ದಾರೆ, “ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿಹೊಗಳಿಸಿದ್ದಾರೆ.

ಮೂಲಗಳ ಪ್ರಕಾರ, ಶಶಿ ತರೂರ್ ಪ್ರಸ್ತುತ ಕೇರಳದಲ್ಲಿದ್ದು, ಇಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಉದ್ದೇಶಿತ ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಈ ಬೆಳವಣಿಗೆಯ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ, ಅಥವಾ ಈ ನಿರ್ಧಾರದ ಬಗ್ಗೆ ಶಶಿ ತರೂರ್ ಅವರಿಂದ ಯಾವುದೇ ಹೇಳಿಕೆ ಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com