

ಮುಂಬೈ: ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ಪಲಾಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಇದೇ ಕಾರಣಕ್ಕೆ ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುರಿದು ಹೋಯಿತು ಎಂದು ನಟ, ನಿರ್ಮಾಪಕ ವಿಧ್ಯಾನ್ ಮಾನೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿಧ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು ಎಂದಿದ್ದಾರೆ.
ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿಧ್ಯಾನ್ ಮಾನೆ, ‘ಪಲಾಶ್ ಸಿನಿಮಾದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ.
ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.
ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು.
Advertisement