

ಪಾಟ್ನಾ: RJD ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ತೇಜಸ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಬಿಹಾರದ ರಾಜಕೀಯದಲ್ಲಿ ತನ್ನ ಅಸ್ವಿತ್ವವನ್ನು ಉಳಿಸಿಕೊಳ್ಳಲು ಯುವಕರು ಆಗಿರುವ ತೇಜಸ್ವಿ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ನೇಮಕ ಮಾಡಿದ್ದಾರೆ.
ಈ ಕುರಿತು ಪಕ್ಷದ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. "Dawn of a New Era, ತೇಜಸ್ವಿ ಯಾದವ್ ಜಿ ಅವರನ್ನು RJD ಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪೋಸ್ಟ್ ಮಾಡಿದೆ.
ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಪಾಲ್ಗೊಂಡಿದ್ದ RJD ಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ವೇಳೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಲಾಲು ಯಾದವ್ ಅವರು ತಮ್ಮ ಪುತ್ರ ತೇಜಸ್ವಿ ಯಾದವ್ ಅವರಿಗೆ ನೇಮಕದ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಕಳೆದ ವರ್ಷ ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಹೊರಹಾಕಿದ್ದರಿಂದ ಕಿರಿಯ ಮಗ ಈಗ ಕುಟುಂಬ ರಾಜಕೀಯ ಪರಂಪರೆಯನ್ನು ಮುಂದುವರಿಸಬೇಕಾಗಿದೆ. ಐಪಿಎಲ್ ನಲ್ಲಿ ಒಮ್ಮೆ ಡೆಲ್ಲಿ ಡೇರ್ ಡೆವಿಲ್ಸ್ ಪರ ಆಡಿದ ತೇಜಸ್ವಿ ಯಾದವ್ ಅವರಿಗೆ ರಾಜಕೀಯ ಹೊಸದಲ್ಲ. 2020 ರ ರಾಜ್ಯ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ RJD ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಅಲ್ಲದೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಅಲ್ಪಾವಧಿಗೆ ಅಧಿಕಾರವನ್ನು ಹಂಚಿಕೊಂಡಿತು.
ಇತ್ತೀಚಿನ ಚುನಾವಣೆಗಳಲ್ಲಿ ಯಾದವ್ ಅವರ ಬಿರುಸಿನ ಪ್ರಚಾರದ ಹೊರತಾಗಿಯೂ ಆರ್‌ಜೆಡಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತು.
Advertisement