Casual Images
ಸಾಂದರ್ಭಿಕ ಚಿತ್ರ

ದೇಶಾದ್ಯಂತ ನಾಳೆ ಬ್ಯಾಂಕ್ ಮುಷ್ಕರ: ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ!

ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ( UFBU)ಈ ಮುಷ್ಕರಕ್ಕೆ ಕರೆ ನೀಡಿದೆ.
Published on

ನವದೆಹಲಿ: ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ನಾಳೆ ರಾಷ್ಟ್ರ ವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಗ್ರಾಹಕರಿಗೆ ಹಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಹೌದು. ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ( UFBU)ಈ ಮುಷ್ಕರಕ್ಕೆ ಕರೆ ನೀಡಿದೆ.

ಇದರಿಂದಾಗಿ ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್ ಗಳ ಶಾಖೆಗಳಲ್ಲಿ ರೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರ್ ನಂತಹ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.

ಆದರೆ, ಖಾಸಗಿ ವಲಯದ ಬ್ಯಾಂಕ್ ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್ ಗಳ ವಹಿವಾಟು ಮೇಲೆ ಮುಷ್ಕರ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ.

ಯುಪಿಎ ಮತ್ತು ಇಂಟರ್ ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಮಾಧ್ಯಮದ ಮೂಲಕ ಲಭ್ಯವಾಗುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ಎಟಿಎಂಗಳಲ್ಲಿ ಹಣದ ಕೊರತೆ ಎದುರಾಗಬಹುದು.

X

Advertisement

X
Kannada Prabha
www.kannadaprabha.com