

ಆಂಧ್ರಪ್ರದೇಶದ ಕರ್ನೂಲಿನ ಅಶೋಕ್ ನಗರದಲ್ಲಿ ಶಾಲಾ ಬಾಲಕನೊಬ್ಬ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ವಿದ್ಯುತ್ ಕಂಬ ರಸ್ತೆಗೆ ಬಿದ್ದು, ವಿದ್ಯುತ್ ತಂತಿಗಳು ಕೆಲವು ಇಂಚುಗಳಷ್ಟು ದೂರದಲ್ಲಿ ಬಿದ್ದ ಪರಿಣಾಮ ಕೂದಲೆಳೆಯ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇನ್ನೂ ಕೆಲವು ಹೆಜ್ಜೆಗಳು ದೂರ ಸಾಗಿದ್ದರೆ ಪ್ರಾಣಾಪಾಯ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (KMC) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ ಅಡಿಪಾಯವನ್ನು ದುರ್ಬಲಗೊಳಿಸಿದೆ.
Advertisement