ಛತ್ತೀಸ್‌ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ

ಶವಗಳ ಹೊರತಾಗಿ, ನಾವು ಎಕೆ-47, ಪಿಸ್ತೂಲ್ ಮತ್ತು ವಿವಿಧ ಸ್ಫೋಟಕ ವಸ್ತುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.
File photo
ಸಾಂದರ್ಭಿಕ ಚಿತ್ರ
Updated on

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ದಕ್ಷಿಣ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತ್ಯೆಯಾಗಿದ್ದಾರೆ.

ಜಿಲ್ಲಾ ಮೀಸಲು ಪೊಲೀಸ್ ಪಡೆ(ಡಿಆರ್‌ಜಿ) ನಡೆಸಿದ ಈ ಎನ್‌ಕೌಂಟರ್‌ನಲ್ಲಿ, ಎಕೆ -47 ರೈಫಲ್, 9 ಎಂಎಂ ಪಿಸ್ತೂಲ್ ಮತ್ತು ಭಾರೀ ಪ್ರಮಾಣದ ಮದ್ದುಗುಂಡುಗಳು ಪತ್ತೆಯಾಗಿವೆ.

“ಶಸ್ತ್ರಸಜ್ಜಿತ ಮಾವೋವಾದಿ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಡಿಆರ್‌ಜಿ ತಂಡವು ಇಂದು ಬೆಳಗ್ಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ದಟ್ಟವಾದ ಕಾಡಿನೊಳಗೆ ನಕ್ಸಲರ ಹಿಮ್ಮೆಟ್ಟುತ್ತಿದ್ದಂತೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಮತ್ತು ಅದು ಹಲವಾರು ಗಂಟೆಗಳ ಕಾಲ ಮುಂದುವರೆಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

File photo
ಛತ್ತೀಸ್‌ಗಢ ಎನ್‌ಕೌಂಟರ್‌: ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ; 2 ದಿನದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ!

ಆರಂಭಿಕ ಗುಂಡಿನ ಚಕಮಕಿಯ ನಂತರ, ಭದ್ರತಾ ಸಿಬ್ಬಂದಿ ಸ್ಥಳದಿಂದ ಇಬ್ಬರು ಗುರುತಿಸಲಾಗದ ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಂಡಿದ್ದಾರೆ.

"ಶವಗಳ ಹೊರತಾಗಿ, ನಾವು ಎಕೆ-47, ಪಿಸ್ತೂಲ್ ಮತ್ತು ವಿವಿಧ ಸ್ಫೋಟಕ ವಸ್ತುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.

ಶೋಧ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಕಾರ್ಯಾಚರಣೆ ಸಕ್ರಿಯವಾಗಿದೆ ಮತ್ತು ಪ್ರದೇಶವನ್ನು ಸುತ್ತುವರಿಯಲು ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com