

ಮುಂಬೈ: ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಸುನೇತ್ರಾ ಪವಾರ್ ಅವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದರು.
ಇದೀಗ ಸುನೇತ್ರಾ ಪವಾರ್ ಅವರಿಗೆ ಅವರ ಪತಿ ಅಜಿತ್ ಪವಾರ್ ಹೊಂದಿದ್ದ ಅಬಕಾರಿ, ಕ್ರೀಡೆ ಮತ್ತು ಯುವಜನ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಅಜಿತ್ ಪವಾರ ಬಳಿ ಇದ್ದ ಹಣಕಾಸು ಖಾತೆಯನ್ನು ಹಂಚಿಕೆ ಮಾಡಿಲ್ಲ. ಅದನ್ನು ಸಿಎಂ ಫಡ್ನವೀಸ್ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.
2024ರಲ್ಲಿ ಎನ್ ಸಿಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಸುನೇತ್ರಾ ಪವಾರ್ ಅವರನ್ನು ಜೂನ್ 18, 2024 ರಂದು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ಇದೀಗ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Advertisement