ಗಾಜಿಯಾಬಾದ್‌: ಹೋಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಇಬ್ಬರ ಕೊಲೆಯಲ್ಲಿ ಅಂತ್ಯ!

ಶುಕ್ರವಾರ ತಡರಾತ್ರಿ ಹೋಟೆಲ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two stabbed to death over delay in food order at Ghaziabad eatery
ಸಾಂದರ್ಭಿಕ ಚಿತ್ರ
Updated on

ಗಾಜಿಯಾಬಾದ್: ಗಾಜಿಯಾಬಾದ್‌ನ ಹೋಟೆಲ್ ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರಣಕ್ಕೆ, ಕೇವಲ ಆಹಾರ ವಿತರಣೆಯಲ್ಲಿ ವಿಳಂಬವಾಗಿದ್ದಕ್ಕೆ ಆರಂಭವಾದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ಅಲ್ಲದೆ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ತಡರಾತ್ರಿ ಹೋಟೆಲ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಮದ್ಯದ ಅಮಲಿನಲ್ಲಿದ್ದ ಗ್ರಾಹಕರ ಎರಡು ಗುಂಪುಗಳು ಆಹಾರ ವಿತರಣೆಯಲ್ಲಿ ವಿಳಂಬದ ಬಗ್ಗೆ ತೀವ್ರ ವಾಗ್ವಾದಕ್ಕಿಳಿದವು. ಈ ವಾಗ್ವಾದ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು. ಎರಡೂ ಕಡೆಯವರು ಹರಿತವಾದ ಆಯುಧಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡರು ಎಂದು ಪೊಲೀಸರು ಹೇಳಿದ್ದಾರೆ.

Two stabbed to death over delay in food order at Ghaziabad eatery
ಮಗನಿಂದಲೇ ತಂದೆ-ತಾಯಿ, ಸಹೋದರಿಯ ಕೊಲೆ! ಮಿಸ್ಸಿಂಗ್ ಕೇಸ್ ನಾಟಕ, ರಹಸ್ಯ ಬಹಿರಂಗ!

ಉಪಾಹಾರ ಗೃಹದಲ್ಲಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ, ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಮೂವರು ಯುವಕರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ಆದರೆ ದಾರಿ ಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com