ರಾಮ ಮಂದಿರ ದೇಣಿಗೆ ಕಳ್ಳತನ: ನಾಳೆ ಟ್ರಸ್ಟ್‌ನ ಮಹತ್ವದ ಸಭೆ!

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದು, ಮುಂದಿನ ಅವರ ಭವಿಷ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Ram Mandir
ರಾಮ ಮಂದಿರ
Updated on

ಲಖನೌ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪದ ಕುರಿತು ತನಿಖೆ ನಡೆಯುತ್ತಿರುವಂತೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸೋಮವಾರ ಮಹತ್ವದ ಸಭೆ ನಡೆಸಲಿದೆ.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದು, ಮುಂದಿನ ಅವರ ಭವಿಷ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಮ ಜನ್ಮಭೂಮಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಮುಖ್ಯಸ್ಥರಾಗಿರುವ ಮಣಿ ರಾಮ್ ದಾಸ್ ಚಾವ್ನಿ ಮಠದಲ್ಲಿ ಈ ಸಭೆ ನಡೆಯಲಿದೆ. ಎಲ್ಲಾ ನಿಯಮಿತ ಮತ್ತು ಪದನಿಮಿತ್ತ ಸದಸ್ಯರು ಚರ್ಚೆಗಳಲ್ಲಿ ಭಾಗವಹಿಸುವಂತೆ ಟ್ರಸ್ಟ್ ಖಜಾಂಚಿ ಗೋವಿಂದ್ ದೇವ್ ಗಿರಿ ಮನವಿ ಮಾಡಿದ್ದಾರೆ.

Ram Mandir
ಅಯೋಧ್ಯೆಯ ರಾಮ ಮಂದಿರದಲ್ಲಿ ಕಳ್ಳತನ ಮಾಡಿರುವರು ಕ್ಯಾನ್ಸರ್ ಬಂದು ಸಾಯುತ್ತಾರೆ: ಬಿಜೆಪಿ ಶಾಸಕ

ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಹಿರಿಯ ಟ್ರಸ್ಟಿ ಕೆ ಪರಾಸರನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಬಹುದು ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಪ್ರಕರಣದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com