

ವಯನಾಡ್: ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಭೂಕುಸಿತದಲ್ಲಿ ನಿರ್ಮಾಣ ಹಂತದಲ್ಲಿರುವ ಕೋಯಿಕ್ಕೋಡ್-ವಯನಾಡ್ ಅವಳಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
2024 ರಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸುಮಾರು 300 ಜನರು ಸಾವನ್ನಪ್ಪಿ ಎರಡು ಗ್ರಾಮಗಳು ನಾಶವಾದವು. ಸದ್ಯ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡಗಳು ಮೊಕ್ಕಾಂ ಹೂಡಿವೆ. ಕಾರ್ಮಿಕರನ್ನು ನಿರ್ಮಾಣ ಸ್ಥಳಕ್ಕೆ ಸಾಗಿಸಿದ ಕೆಲವು ವಾಹನಗಳು ಸಮಾಧಿಯಾಗಿ ಕಂಡುಬಂದಿವೆ. ಸ್ಥಳೀಯರು ಮೂವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ
ವಯನಾಡ್ ಮತ್ತು ಕೋಯಿಕ್ಕೋಡ್‌ನಲ್ಲಿ ಸುರಂಗದ ನಿರ್ಮಾಣ ಕಾರ್ಯ ಎರಡೂ ಕಡೆಯಿಂದ ನಡೆಯುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ನಿರ್ಮಾಣ ಕಾರ್ಯ ಉದ್ಘಾಟನೆಯಾಯಿತು.ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ ತಂಗುತ್ತಿದ್ದರು.