

ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ (Vijay) ಅವರು ಯಾವುದೇ ಪೂರ್ವ ಸೂಚನೆ ಇಲ್ಲದೆ ಚೆನ್ನೈನ ಎಗ್ಮೋರ್‌ನಲ್ಲಿರುವ ಮಕ್ಕಳ ಆರೋಗ್ಯ ಮತ್ತು ಮಕ್ಕಳ ಆಸ್ಪತ್ರೆಯನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ಸಮಯದಲ್ಲಿ, ಅವರು ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿದ್ದು ಮಕ್ಕಳಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತಂತೆ ಮಹಿಳೆಯೊಬ್ಬರು ಮಾಡಿದ್ದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಲಂಚ ಮತ್ತು ರೋಗಿಗಳ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಕಳವಳದ ನಡುವೆಯೇ ಈ ಅನಿರೀಕ್ಷಿತ ತಪಾಸಣೆ ನಡೆದಿದೆ. ಸಿಎಂ ವಿಜಯ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿದ ತಮಿಳುನಾಡು ಆರೋಗ್ಯ ಸಚಿವರು, ಬೇಜವಾಬ್ದಾರಿ ಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ಹೆಚ್ಚಿನ ಶೌಚಾಲಯಗಳು, ಹೆಚ್ಚುವರಿ ವಾರ್ಡ್‌ಗಳು ಮತ್ತು ಕ್ಯಾಂಟೀನ್‌ನ ಅಗತ್ಯವನ್ನು ಸಿಬ್ಬಂದಿ ತಿಳಿಸಿದರು ಎಂದರು.