ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ಇಬ್ಬರು ಸಾವು -ಅವಶೇಷಗಳ ಅಡಿ ನಾಲ್ವರು ಸಿಲುಕಿರುವ ಶಂಕೆ

ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಐವರು ಸಿಲುಕಿಕೊಂಡಿದ್ದು, ಒಬ್ಬರು ಹೊರಬಂದಿದ್ದಾರೆ ಎಂದು ವರದಿಯಾಗಿದೆ.
Landslide in Arunachal pradesh
ಅರುಣಾಚಲಪ್ರದೇಶದಲ್ಲಿ ಭೂಕುಸಿತ

ಇಟಾನಗರ್‌: ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ನಿರಂತರ ಮಳೆಯಿಂದ ಭಾರೀ ಭೂಕುಸಿತ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಐವರು ಸಿಲುಕಿಕೊಂಡಿದ್ದು, ಒಬ್ಬರು ಹೊರಬಂದಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಸಿಬ್ಬಂದಿ ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆದಿದ್ದಾರೆ. ಅವಶೇಷಗಳ ಅಡಿ ನಾಲ್ವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ದುರಂತದಲ್ಲಿ ಸಾವನ್ನಪ್ಪಿದವರು ಹಾಗೂ ಗಾಯಗೊಂಡವರು ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ. ಅವರೆಲ್ಲ ಈ ಪ್ರದೇಶದಲ್ಲಿ ಸ್ಥಳೀಯ ನಿರ್ಮಾಣ ಯೋಜನೆಯ ಕೆಲಸದಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಿಸಲು ಮತ್ತು ಅವಶೇಷಗಳ ಅಡಿ ಸಿಲುಕಿದವರ ರಕ್ಷಣೆಗೆ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಅರುಣಾಚಲ ಪ್ರದೇಶ ಪೊಲೀಸರ ತಂಡಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com