ನೋಯ್ಡಾದಲ್ಲಿ ಭೀಕರ ಅಪಘಾತ: ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಮೂವರು ಪಾದಚಾರಿಗಳು ಸಾವು!

ಮೃತರನ್ನು ಕರಣ್(22), ವಿಶ್ವಜೀತ್ (24) ಮತ್ತು ಮಿಥುನ್ (25) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಿಹಾರದ ಅರಾರಿಯಾ ಜಿಲ್ಲೆಯ ನಿವಾಸಿಗಳು.
representational image
ಸಾಂದರ್ಭಿಕ ಚಿತ್ರ
Updated on

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದ ಜೆವರ್ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮೂವರು ಕಾರ್ಮಿಕರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜೆವರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೆವರ್-ಖುರ್ಜಾ ರಸ್ತೆಯಲ್ಲಿರುವ ನೀಮ್ಕಾ ಗ್ರಾಮದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಎಸ್ ಯುವಿ ಕಾರು ಡಿಕ್ಕಿ ಹೊಡೆಗು ಮೂವರು ಪಾದಚಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಕರಣ್(22), ವಿಶ್ವಜೀತ್ (24) ಮತ್ತು ಮಿಥುನ್ (25) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಿಹಾರದ ಅರಾರಿಯಾ ಜಿಲ್ಲೆಯ ನಿವಾಸಿಗಳಾಗಿದ್ದು, ಭತ್ತ ನಾಟಿ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

representational image
ಹಿಮಾಚಲದಲ್ಲಿ ಭೀಕರ ಅಪಘಾತ: ಪ್ರಪಾತಕ್ಕೆ ಬಿದ್ದ ಬೊಲೆರೊ; ಏಳು ಮಂದಿ ದುರ್ಮರಣ

ಮೃತರ ಕುಟುಂಬ ಸದಸ್ಯರು ದೂರು ನೀಡಿದ ನಂತರ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡ ರಚಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com