ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ

ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಸಾಕ್ಷ್ಯಗಳು ಆತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Software engineer's death at Mussoorie homestay: Husband held, probe underwaya
ಸಾಂದರ್ಭಿಕ ಚಿತ್ರ
Updated on

ಡೆಹ್ರಾಡೂನ್: ಮಸ್ಸೂರಿ-ಧನೌಲ್ಟಿ ರಸ್ತೆಯಲ್ಲಿರುವ ಹೋಂಸ್ಟೇಯಲ್ಲಿ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಪರುಪುಡಿ ರಾಧಾ ಗಾಯತ್ರಿ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು ಅವರ ಪತಿ ಸೋಮಯಾಶ್ರೀ ಚರಣ್ ಅವರನ್ನು ಶನಿವಾರ ಬಂಧಿಸಿದ್ದಾರೆ.

ಪತ್ನಿಯ ಸಾವಿನ ನಂತರ ಮಸ್ಸೂರಿಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ಸೋಮಯಾಶ್ರೀ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ ನಂತರ ಆರೋಪಿಯನ್ನು ನವದೆಹಲಿಯಲ್ಲಿ ಬಂಧಿಸಲಾಗಿದೆ.

ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಸಾಕ್ಷ್ಯಗಳು ಆತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Software engineer's death at Mussoorie homestay: Husband held, probe underwaya
ಫಾರ್ಮ್‌ಹೌಸ್‌ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!

ಜೂನ್ 15, 2026 ರಂದು ಮಸ್ಸೂರಿಯ ಬಟಾಘಾಟ್ ಪೊಲೀಸ್ ಔಟ್‌ಪೋಸ್ಟ್ ಬಳಿಯ ತಿಪ್ರಿಧಾರ್‌ನಲ್ಲಿರುವ ಕಿಯಾನಾ ಹೋಂಸ್ಟೇಯ ಕೋಣೆಯೊಳಗೆ ಗಾಯತ್ರಿ ಶವವಾಗಿ ಪತ್ತೆಯಾಗಿದ್ದರು. ಅವರು ರಜೆಗಾಗಿ ತಮ್ಮ ಪತಿಯೊಂದಿಗೆ ಬೆಟ್ಟದ ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು.

ಈ ಸಂಬಂಧ ಮಹಿಳೆಯ ಕುಟುಂಬದ ದೂರಿನ ಮೇರೆಗೆ ಮಸ್ಸೂರಿ ಪೊಲೀಸ್ ಠಾಣೆಯಲ್ಲಿ ಚರಣ್ ವಿರುದ್ಧ ಪ್ರಕರಣ ದಾಖಲಾಗಿದೆ.

"ಘಟನಾ ಸ್ಥಳದಿಂದ ಮದ್ಯದ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗಿನ ತನಿಖೆಯಲ್ಲಿ ಬಹಿರಂಗವಾದ ಸಂಗತಿಗಳು ಮತ್ತು ಪುರಾವೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ಮಾಡಲಾಗುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಪೂರ್ವ ದೆಹಲಿಯ ಮಧು ವಿಹಾರ್ ನಿವಾಸಿಯಾದ ಗಾಯತ್ರಿ ಮತ್ತು ಚರಣ್, ನವೆಂಬರ್ 2025 ರಲ್ಲಿ ವಿವಾಹವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com