ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳಿಬ್ಬರಿಗೆ ವಿದ್ಯುತ್ ಕೊಟ್ಟು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!

ಪತ್ನಿಯ ಕೈಬಿಟ್ಟಿದ್ದರಿಂದ ಎದೆಗುಂದಿದ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕ್ರೂರವಾಗಿ ಕರೆಂಟ್ ಶಾಕ್ ಕೊಟ್ಟು ಕೊಂದು, ನಂತರ ಅದೇ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
Updated on

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪುದುಕೊಟ್ಟೈ ಬಳಿಯ ಸವೇರಿಯಾರ್ಪುರಂನಲ್ಲಿ ಭಯಾನಕ ಮತ್ತು ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಕೈಬಿಟ್ಟಿದ್ದರಿಂದ ಎದೆಗುಂದಿದ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕ್ರೂರವಾಗಿ ಕರೆಂಟ್ ಶಾಕ್ ಕೊಟ್ಟು ಕೊಂದು, ನಂತರ ಅದೇ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸರ ಪ್ರಕಾರ, ಮೃತನ್ನು 40 ವರ್ಷದ ಟ್ರಕ್ ಚಾಲಕ ಮೇರಿ ಮೈಕೆಲ್, ಮಕ್ಕಳಾದ 14 ವರ್ಷದ ಮಗಳು ಮೇರಿ ನಿರೋಷಾ ಮತ್ತು 12 ವರ್ಷದ ಮಗ ಮೇರಿ ಕೆನಿಸ್ಟನ್ ಎಂದು ಗುರುತಿಸಲಾಗಿದೆ. ಇಬ್ಬರೂ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುತ್ತಿದ್ದರು. ಮೇರಿ ಮೈಕೆಲ್ ಪತ್ನಿ ಸುಮಾರು ಆರು ತಿಂಗಳ ಹಿಂದೆ ತಮ್ಮ ಕುಟುಂಬವನ್ನು ತೊರೆದು ಪರಪುರುಷನೊಂದಿಗೆ ಓಡಿ ಹೋಗಿದ್ದಳು. ಈ ಘಟನೆಯ ನಂತರ ಮೈಕೆಲ್ ತೀವ್ರ ಆಘಾತ ಮತ್ತು ಖಿನ್ನತೆಗೆ ಒಳಗಾಗಿದ್ದರು.

ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ: ನಾಗ್ಪುರದ ಸ್ವಯಂ ಘೋಷಿತ ದೇವಮಾನವ ಬಂಧನ

ಮಕ್ಕಳು ಗಾಢ ನಿದ್ರೆಗೆ ಜಾರಿದಾಗ, ಮೈಕೆಲ್ ಅವರ ದೇಹದ ಸುತ್ತಲೂ ಸಡಿಲವಾದ ವಿದ್ಯುತ್ ತಂತಿಗಳನ್ನು ಕಟ್ಟಿ ಕರೆಂಟ್ ಶಾಕ್ ಕೊಟ್ಟಿದ್ದಾನೆ. ಇಬ್ಬರು ಮಕ್ಕಳು ನೋವಿನಿಂದ ಸಾವನ್ನಪ್ಪಿದ ನಂತರ ಮೈಕೆಲ್ ಅದೇ ತಂತಿಗಳನ್ನು ತಮ್ಮ ದೇಹದ ಸುತ್ತಲೂ ಸುತ್ತಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಮಧ್ಯಾಹ್ನದವರೆಗೂ ಬಾಗಿಲು ತೆರೆಯದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದಾಗ, ಒಳಗಿನ ದೃಶ್ಯ ಭಯಾನಕವಾಗಿತ್ತು. ಮೂವರ ಶವಗಳು ಒಂದೇ ಹಾಸಿಗೆಯ ಮೇಲೆ ಬಿದ್ದಿದ್ದು, ಅವುಗಳ ಸುತ್ತಲೂ ವಿದ್ಯುತ್ ತಂತಿಗಳು ಸುತ್ತಿಕೊಂಡಿರುವುದು ಕಂಡುಬಂದಿತ್ತು. ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದ್ದಾರೆ. ಪುದುಕೊಟ್ಟೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com