

ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡದೆ ವಿಳಂಬ ಮಾಡುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಲ್ಲಿ ಮನವಿ ಮಾಡಬೇಕಾ? ಶ್ವೇತಭವನದ ಹೊರಗೆ ಪ್ರತಿಭಟನೆ ನಡೆಸಬೇಕಾ? ಎಂದು ಕಿಡಿಕಾರಿದ್ದಾರೆ. ನಮ್ಮ ತಾಳ್ಮೆ ಮುಗಿಯುತ್ತಿದೆ" ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಹೇಳಿರುವುದಾಗಿ ದಿ ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.
ವಿಧಾನಸಭೆಯಲ್ಲಿ ರಾಜ್ಯ ಸ್ಥಾನಮಾನ ವಿಷಯ ಎತ್ತುವುದರಿಂದ ಬರಲ್ಲ ಅಂತಾ ಮೊದಲಿಗೆ ಹೇಳಿದ್ದರು. ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆ ಮಾಡುವುದರಿಂದ ರಾಜ್ಯತ್ವ ಬರುವುದಿಲ್ಲ ಅಂದ್ರು. ಈಗ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ರೂ ಸಿಗಲ್ಲ ಅಂತಿದ್ದಾರೆ. ಹಾಗಾಗೀ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಪಡೆಯಲು ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಬಳಿಗೆ ಹೋಗಬೇಕೇ? ಎಂದು ಕೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ಪಷ್ಟಪಡಿಸುವವರೆಗೆ, ಜಮ್ಮು ಮತ್ತು ಕಾಶ್ಮೀರದ ರಾಜ್ಯಸ್ಥಾನಮಾನಕ್ಕಾಗಿ ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮದೇ ಆದ ರಾಷ್ಟ್ರ ರಾಜಧಾನಿಯಲ್ಲಿ ಬಾಗಿಲು ತಟ್ಟುತ್ತೇವೆ" ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದು ನವದೆಹಲಿಯಲ್ಲಿ ನ್ಯಾನಲ್ ಕಾನ್ಫರೆನ್ಸ್ ಪ್ರತಿಭಟನೆ ನಡೆಸಲಿದೆ. ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 20 ರಿಂದ ಆಗಸ್ಟ್ 13 ರವರೆಗೆ ನಡೆಯಲಿದೆ.
ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು. ಹಿಂದಿನ ರಾಜ್ಯವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.