ನೋಯ್ಡಾದಲ್ಲಿ ಭೀಕರ ಅಗ್ನಿ ದುರಂತ; 2 ಸಾವು, 100 ಜನರ ರಕ್ಷಣೆ

ನೋಯ್ಡಾದ ಮಾಮುರಾ ಗ್ರಾಮದ 5 ಅಂತಸ್ತಿನ ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತದಲ್ಲಿ 2 ಸಾವನ್ನಪ್ಪಿದ್ದಾರೆ. ಜೊತೆಗೆ ಸುಮಾರು 50 ಕುಟುಂಬಗಳ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
Scenes of people being rescued
ಜನರ ರಕ್ಷಣೆಯ ದೃಶ್ಯಗಳುOnline Desk
Updated on

ನೋಯ್ಡಾ (ಉತ್ತರ ಪ್ರದೇಶ): ನೋಯ್ಡಾದ ಮಾಮುರಾ ಗ್ರಾಮದ 5 ಅಂತಸ್ತಿನ ವಸತಿ ಕಟ್ಟಡದಲ್ಲಿ ಉಂಟಾದ ಭೀಕರ ಅಗ್ನಿ ದುರಂತದಲ್ಲಿ 2 ಸಾವನ್ನಪ್ಪಿದ್ದಾರೆ. ಜೊತೆಗೆ ಸುಮಾರು 50 ಕುಟುಂಬಗಳ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಸ್ಪೋಟಕ್ಕೆ ಕಾರಣವೇನು?

ವಸತಿ ಕಟ್ಟಡದ ಕೆಳಗೆ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ವಾಹನದ ಸ್ಕೂಟರ್ ಬ್ಯಾಟರಿ ಸ್ಫೋಟಗೊಂಡಿದ್ದೇ ಈ ದುರಂತಕ್ಕೆ ಪ್ರಾಥಮಿಕ ಕಾರಣ ಎಂದು ನೋಯ್ಡಾ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇನ್ನು ಈ EV ಸ್ಪೋಟದ ಕಾರಣದಿಂದ ಹೊತ್ತಿಕೊಂಡ ಬೆಂಕಿಯ ಕಿಡಿಯು ಪಕ್ಕಾದಲ್ಲೇ ಪಾರ್ಕ್ ಮಾಡಲಾದ ಪೆಟ್ರೋಲ್ ಗಡಿಗಳಿಗೂ ವ್ಯಾಪಿಸಿದ್ದು, ಇದರಿಂದಾಗಿ ದೊಡ್ಡ ಮಟ್ಟದಲ್ಲಿ ಹೊಗೆ ಆವರಿಸಿದೆ.

Scenes of people being rescued
ನಾಗಾಲ್ಯಾಂಡ್‌: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!

ಮುಂದುವರೆದು, ಬೆಂಕಿಯಿಂದ ಉಂಟಾದ ಹೊಗೆಯ ಪರಿಣಾಮ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಇಬ್ಬರು ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ. ಇನ್ನ ಆ ಇಬ್ಬರನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನುಳಿದಂತೆ ಒಂದು ಮಗು ಮತ್ತು ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಅದರಂತೆ, ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತ ಕಾರ್ಯ ಮುಂದುವರೆಸಿದ್ದಾರೆ.

ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಕಟ್ಟಡದ ಮಾಲೀಕನನ್ನು ಬಂಧಿಸಿದ್ದಾರೆ. ಕಟ್ಟಡದಲ್ಲಿ ಕಡ್ಡಾಯ ಅಗ್ನಿಶಾಮಕ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿದೆಯೇ ಮತ್ತು ಪಾರ್ಕಿಂಗ್ ಜಾಗದಲ್ಲಿ ಇವಿ ಚಾರ್ಜ್ ಮಾಡಲು ಅನುಮತಿ ಇತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com