ಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್‌ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್‌ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನಾಯಕರು, ಶಾಲಾ ಶಿಕ್ಷಕರು, ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಕಲ್ಮಾ ಪಠಿಸಲು ನೀಡಿದ ಸೂಚನೆಗೆ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.
Hyderabad teacher sacked for asking Hindu student to do...
ಸಾಂದರ್ಭಿಕ ಚಿತ್ರ
Updated on: 

ಹೈದರಾಬಾದ್‌: ಹೈದರಾಬಾದ್‌ನ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಯೊಬ್ಬರಿಗೆ ಇಸ್ಲಾಮಿಕ್ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಶಿಕ್ಷಕಿ, ತಮ್ಮ ಮಗುವಿಗೆ ಇಸ್ಲಾಮಿಕ್‌ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್‌ ನೀಡಿದ್ದಾರೆ ಎಂದು ಆರೋಪಿಸಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನಾಯಕರು, ಶಾಲಾ ಶಿಕ್ಷಕರು, ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಕಲ್ಮಾ ಪಠಿಸಲು ನೀಡಿದ ಸೂಚನೆಗೆ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಏತನ್ಮಧ್ಯೆ, ವಿವಾದ ತೀವ್ರ ಸ್ವರೂಪ ಪಡೆಯುತ್ತಿದಂತೆ ಶಿಕ್ಷಕಿಯನ್ನು ವಜಾಗೊಳಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

Hyderabad teacher sacked for asking Hindu student to do...
'ಇದನ್ನು ನಿರ್ಲಕ್ಷಿಸಿದರೆ, ಇಂತಹ ಘಟನೆಗಳು ರಾಜ್ಯದಾದ್ಯಂತ ಹರಡುವ ಅಪಾಯವಿದೆ': 'ಕಲ್ಮಾ ಪಠಣ' ವಿವಾದಕ್ಕೆ ಬಂಡಿ ಸಂಜಯ್ ಕುಮಾರ್!

ಇದಕ್ಕೂ ಮೊದಲು, ವಿದ್ಯಾರ್ಥಿಯ ಸಂಬಂಧಿಯೊಬ್ಬರು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿಯೊಬ್ಬರು ದೂರನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು.

2ನೇ ತರಗತಿಯ ವಿದ್ಯಾರ್ಥಿಗೆ ಇಸ್ಲಾಂ ಧರ್ಮದ ‘ಕಲ್ಮಾ’ ಮತ್ತು ಸುರಾ’ವನ್ನು ಕಲಿಯುವಂತೆ ಹೋಮ್‌ವರ್ಕ್ ನೀಡಲಾಗಿದೆ ಎಂಬ ಆರೋಪದ ಮೇಲೆ ಖಾಸಗಿ ಶಾಲೆಯ ಶಿಕ್ಷಕಿ ಶೇಖ್ ಆಯಿಷಾ ಪರ್ವೀನ್ ಅವರನ್ನು ವಜಾಗೊಳಿಸಲಾಗಿದೆ. ವಿದ್ಯಾರ್ಥಿಯ ಚಿಕ್ಕಮ್ಮ ವಿದ್ಯಾರ್ಥಿಯ ಮನೆಕೆಲಸದ ಡೈರಿಯನ್ನು ಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಈ ವಿಷಯ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ನಾಯಕರು ವಿದ್ಯಾರ್ಥಿಯ ಕುಟುಂಬವನ್ನು ಭೇಟಿ ಮಾಡಿ ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳಿಗೆ ಧಾರ್ಮಿಕ ಬೋಧನೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಮತ್ತು ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವಿವರವಾದ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com