'ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯ'; Sonam Wangchuk ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ: Delhi High court ಆದೇಶ

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸೋನಂ ವಾಂಗ್‌ಚುಕ್ ಅವರ ಆರೋಗ್ಯದ ನಿಯಮಿತ ವೈದ್ಯಕೀಯ ತಪಾಸಣೆ ನಡೆಸುವುದಕ್ಕೆ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
Sonam Wangchuk
ಸೋನಂ ವಾಂಗ್‌ಚುಕ್
Updated on

ನವದೆಹಲಿ: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಆರೋಗ್ಯವನ್ನು ಪ್ರತಿದಿನ ಪರಿಶೀಲಿಸಬೇಕು ಮತ್ತು ಅಗತ್ಯವಿದ್ದಾಗ ತಕ್ಷಣ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ಬಳಿಕ ಈ ಆದೇಶ ನೀಡಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸೋನಂ ವಾಂಗ್‌ಚುಕ್ ಅವರ ಆರೋಗ್ಯದ ನಿಯಮಿತ ವೈದ್ಯಕೀಯ ತಪಾಸಣೆ ನಡೆಸುವುದಕ್ಕೆ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, "ಯಾವುದೇ ನಾಗರಿಕನ ಜೀವ ಅಮೂಲ್ಯ. ಅವರ ಜೀವವನ್ನು ರಕ್ಷಿಸಲು ಸರ್ಕಾರದ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು" ಎಂದು ಹೇಳಿತು.

Sonam Wangchuk
ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯಗೊಳಿಸುತ್ತೇನೆ: ರಾಖಿ ಸಾವಂತ್ ಶಪಥ, ಜಂತರ್ ಮಂತರ್'ನತ್ತ ನಟಿ ಹೆಜ್ಜೆ!

ಇದೇ ವೇಳೆ, "ಸಾಲಿಸಿಟರ್ ಜನರಲ್ ಅವರ ನಿಲುವನ್ನು ನಾವು ಶ್ಲಾಘಿಸುತ್ತೇವೆ. ಸೋನಂ ವಾಂಗ್‌ಚುಕ್ ಅವರ ಆರೋಗ್ಯವನ್ನು ಪ್ರತಿದಿನ ಮೇಲ್ವಿಚಾರಣೆ ಮಾಡಬೇಕು. ಅಗತ್ಯವಿರುವ ಎಲ್ಲ ವೈದ್ಯಕೀಯ ಚಿಕಿತ್ಸೆ ಮತ್ತು ಮಧ್ಯಸ್ಥಿಕೆಯನ್ನು ತಕ್ಷಣ ಒದಗಿಸಬೇಕು" ಎಂದು ನ್ಯಾಯಪೀಠ ಆದೇಶಿಸಿತು.

ಸೋನಂ ವಾಂಗ್‌ಚುಕ್ ಅವರು ಜೂನ್ 28ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಅಂದಿನಿಂದಲೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ನೀಟ್ (NEET) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಕ್‌ರೋಚ್ ಜನತಾ ಪಾರ್ಟಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 25 ದಿನಗಳಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com