ದೆಹಲಿ: CJP ಸ್ಥಾಪಕ ಅಭಿಜೀತ್ ಡಿಪ್ಕೆ ಮೇಲೆ ಇಂಕ್ ಎಸೆತ; ಮಹಿಳೆ ಪೊಲೀಸರ ವಶಕ್ಕೆ! Video

ಆ ಮಹಿಳೆಯ ಗುರುತು ಮತ್ತು ಈ ಕೃತ್ಯದ ಹಿಂದಿನ ಉದ್ದೇಶ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದಾಗ್ಯೂ, ಆಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
Abhijeet Dipke
ಅಭಿಜೀತ್ ಡಿಪ್ಕೆ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಮಧ್ಯಾಹ್ನ ಮತ್ತೊಂದು ಹೈಡ್ರಾಮಾ ನಡೆಯಿತು. ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಪೊಲೀಸ್ ಕಾರ್ಯಾಚರಣೆ ನಡೆದ ಬಳಿಕ ನಂತರ ಕಾಕ್ರೋಚ್ ಜನತಾ ಪಾರ್ಟಿ'ಯ (CJP) ಸ್ಥಾಪಕ ಅಭಿಜೀತ್ ಡಿಪ್ಕೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಮಹಿಳೆಯೊಬ್ಬರು ಅವರ ಇಂಕ್ ನಂತಹ ಶಾಯಿಯನ್ನು ಎಸೆದಿದ್ದಾರೆ.

ಈ ಘಟನೆಯಿಂದಾಗಿ ಕಾರ್ಯಕ್ರಮಕ್ಕೆ ಸ್ವಲ್ಪ ಕಾಲ ಅಡಚಣೆ ಉಂಟಾಯಿತು. ಬೆಂಬಲಿಗರು ವೇದಿಕೆಯತ್ತ ಧಾವಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆ ಮಹಿಳೆಯ ಗುರುತು ಮತ್ತು ಈ ಕೃತ್ಯದ ಹಿಂದಿನ ಉದ್ದೇಶ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದಾಗ್ಯೂ, ಆಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

20 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಿಂದ ಆರೋಗ್ಯ ಹದಗೆಟ್ಟಿದ್ದರಿಂದ ದೆಹಲಿ ಪೊಲೀಸರು ವಾಂಗ್‌ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಇಂದು ಬೆಳಗ್ಗೆ ನಡೆದ ಈ ಕಾರ್ಯಾಚರಣೆಯ ಸಂದರ್ಭದಲ್ಲಿ, ಕೆಲವು ಪ್ರತಿಭಟನಾಕಾರರು ಪೊಲೀಸ್ ಕ್ರಮಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದ್ದರಿಂದ ಸ್ವಲ್ಪ ಕಾಲ ಗೊಂದಲ ಉಂಟಾಗಿತ್ತು.

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ವಿರುದ್ಧ ಸಿಜೆಪಿ (CJP) ನೇತೃತ್ವದ ಪ್ರತಿಭಟನೆಗೆ ಬೆಂಬಲವಾಗಿ ವಾಂಗ್‌ಚುಕ್ ಜೂನ್ 28 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಉಪವಾಸದ ಅವಧಿಯಲ್ಲಿ ಅವರು ಸುಮಾರು 9.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಅವರ ಮೇಲೆ ನಿಗಾ ವಹಿಸಿದ್ದ ವೈದ್ಯರು ತಿಳಿಸಿದ್ದರು; ಜೊತೆಗೆ ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಕಟವಾಗಿ ಗಮನಿಸಲಾಗುತ್ತಿತ್ತು.

Abhijeet Dipke
Watch | ನವದೆಹಲಿ: ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ!

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಪೊಲೀಸ್ ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಡಿಪ್ಕೆ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com