ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು: ಅಣ್ಣಾ ಹಜಾರೆ

ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.
Anna Hazare, Wangchuk
ಅಣ್ಣಾ ಹಜಾರೆ, ವಾಂಗ್ ಚಾಕ್
Updated on

ನವದೆಹಲಿ: ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.

ಸರ್ಕಾರವು ಅವರ ತಾಳ್ಮೆಯನ್ನು ಪರೀಕ್ಷಿಸಬಾರದು. ಅವರ ಬೇಡಿಕೆಗಳಿಗೆ ಹೌದು ಅಥವಾ ಇಲ್ಲ ಎಂದು ಹೇಳಲಿ, ಆದರೆ ಚರ್ಚೆ ನಡೆಸುವುದರಲ್ಲಿ ತಪ್ಪೇನಿದೆ?" ಎಂದು ಹಜಾರೆ ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.

ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.

Anna Hazare, Wangchuk
'ಇದು ಭಾರತದ 2ನೇ ಸ್ವಾತಂತ್ರ್ಯ ಹೋರಾಟ': ಜುಲೈ 20ರ 'ಸಂಸತ್ ಚಲೋ' ಯಶಸ್ವಿಗೊಳಿಸಲು Sonam Wangchuk ಕರೆ

ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ 21ನೇ ದಿನದಂದು ಆರೋಗ್ಯ ಹದಗೆಟ್ಟಿದ್ದರಿಂದ, ದೆಹಲಿ ಪೊಲೀಸರು ಅವರನ್ನು ಶನಿವಾರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು.

2011ರಲ್ಲಿ ಲೋಕಪಾಲ ಕಾಯ್ದೆಗಾಗಿ ದೆಹಲಿಯಲ್ಲಿ ಅಣ್ಣಾ ಹಜಾರೆ ನಡೆಸಿದ್ದ ಉಪವಾಸ ಸತ್ಯಾಗ್ರಹವು ಆಗಿನ ಯುಪಿಎ (UPA) ಸರ್ಕಾರವನ್ನು ತಲ್ಲಣಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com