ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ!

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
Parliament
ಪಾರ್ಲಿಮೆಂಟ್
Updated on

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು ಇಂದು ಆರಂಭವಾಗುತ್ತಿದ್ದು, ವಿವಾದಾತ್ಮಕ ವಿಚಾರಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿದ್ದು, ಅಧಿವೇಶನವು ಭಾರಿ ಜಂಗಿಕುಸ್ತಿಯೊಂದಿಗೆ ಆರಂಭವಾಗುವ ನಿರೀಕ್ಷೆಯಿದೆ.

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ 'ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026' ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, 'ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026' ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

ಇತರ ಪ್ರಮುಖ ಶಾಸನೀಯ ಪ್ರಸ್ತಾವನೆಗಳಲ್ಲಿ 'ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ, 2026'; 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, 2026'; 'ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2026'; ಹಾಗೂ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026' ಸೇರಿವೆ. ಈ ಮಧ್ಯೆ ಅಧಿವೇಶನದಲ್ಲಿ ಪಟ್ಟಿ ಮಾಡಲಾದ ಮಸೂದೆಗಳ ಮೇಲಿನ ಚರ್ಚೆಗೆ ಸಮಯವನ್ನು ಅಂತಿಮಗೊಳಿಸಲು ಲೋಕಸಭೆಯ ಸ್ಪೀಕರ್ ನೇತೃತ್ವದ 'ಕಾರ್ಯಕಲಾಪ ಸಲಹಾ ಸಮಿತಿ ಸಭೆ ಭಾನುವಾರ ನಡೆಯಿತು.

ಸಮಿತಿಯು ಹಲವಾರು ಪ್ರಮುಖ ಶಾಸನಗಳ ಚರ್ಚೆಗೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿತು. ಜನರ ಸಮಸ್ಯೆಗಳನ್ನು ರಚನಾತ್ಮಕ ರೀತಿಯಲ್ಲಿ ಚರ್ಚಿಸಲು ಅನುಕೂಲವಾಗುವಂತೆ, ಅಧಿವೇಶನವು ಸುಗಮವಾಗಿ ಮತ್ತು ಕ್ರಮಬದ್ಧವಾಗಿ ನಡೆಯಲು ಸಹಕರಿಸುವಂತೆ ಸ್ಪೀಕರ್ ಎಲ್ಲಾ ಪಕ್ಷಗಳಿಗೆ ಮನವಿ ಮಾಡಿದರು.

Parliament
ಮುಂಗಾರು ಅಧಿವೇಶನ ಹಿನ್ನೆಲೆ ದೆಹಲಿಯಲ್ಲಿ ನಿಷೇಧಾಜ್ಞೆ; CJP 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!

ಕಲಾಪಗಳು ಅಧಿಕೃತವಾಗಿ ಪ್ರಾರಂಭವಾಗುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ತಮ್ಮ ವಾಡಿಕೆಯಂತೆ ಭಾಷಣವನ್ನು ಮಾಡುವ ನಿರೀಕ್ಷೆಯಿದೆ. ಉಭಯ ಸದನಗಳ ಸುಗಮ ಕಾರ್ಯನಿರ್ವಹಣೆಗೆ ಸಹಕರಿಸುವಂತೆ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com