ತ್ರಿಪುರಾ: ಪೊಲೀಸ್ ಪ್ರಧಾನ ಕಚೇರಿಯಲ್ಲಿ DGP ಅನುರಾಗ್ ಧಂಕರ್ ಸಾವು; ಆತ್ಮಹತ್ಯೆಯ ಶಂಕೆ!

ಪ್ರಾಥಮಿಕ ವರದಿಗಳ ಪ್ರಕಾರ ಅವರು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅಧಿಕಾರಿಗಳು ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ ಮತ್ತು ತನಿಖೆ ನಡೆಯುತ್ತಿದೆ.
Anurag Dhankar
ಅನುರಾಗ್ ಧಂಕರ್
Updated on

ಅಗರ್ತಲಾ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (DGP) ಮತ್ತು ಹಿರಿಯ IPS ಅಧಿಕಾರಿ ಅನುರಾಗ್ ಧಂಕರ್ ಅವರು ಸೋಮವಾರ ಅಗರ್ತಲಾದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯ ತಮ್ಮ ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಅವರು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅಧಿಕಾರಿಗಳು ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ ಮತ್ತು ತನಿಖೆ ನಡೆಯುತ್ತಿದೆ.

ಈ ಘಟನೆಯ ನಂತರ ತ್ರಿಪುರಾ ಮುಖ್ಯಮಂತ್ರಿ ಮತ್ತಿತರ ಹಿರಿಯ ಸರ್ಕಾರಿ ಅಧಿಕಾರಿಗಳು ಡಿಜಿಪಿ ಕಚೇರಿಗೆ ದೌಡಾಯಿಸಿದ್ದಾರೆ.

ಮೃತದೇಹವನ್ನು ಅಗರ್ತಲಾದ ಜಿಬಿ (GB) ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಒಂದು ವೇಳೆ ನಿಮಗೆ ಆತ್ಮಹತ್ಯೆಯ ಆಲೋಚನೆಗಳಿದ್ದರೆ, ಅಥವಾ ನಿಮ್ಮ ಸ್ನೇಹಿತರ ಬಗ್ಗೆ ಕಳವಳವಿದ್ದರೆ ಅಥವಾ ನಿಮಗೆ ಬೆಂಬಲದ ಅಗತ್ಯವಿದ್ದರೆ, ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಸ್ನೇಹ ಫೌಂಡೇಶನ್ - 04424640050, ಟೆಲಿ ಮಾನಸ್ - 14416 (24x7) ಅಥವಾ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 02225521111 (ಸೋಮವಾರದಿಂದ ಶನಿವಾರದವರೆಗೆ - ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ).

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com