CJP protest: ಪ್ರತಿಭಟನೆಗೆ ಅಡ್ಡಿಪಡಿಸಲು, ಕಲ್ಲು ತೂರಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ; ಕೇಂದ್ರದ ವಿರುದ್ಧ ದೀಪ್ಕೆ ಕಿಡಿ

ಸ್ವತಃ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೇ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿ, ಅಪಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೀಪ್ಕೆ ದೂರಿದ್ದಾರೆ.
Abhijeet Dipke
ಅಭಿಜೀತ್ ದೀಪ್ಕೆ
Updated on

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಲು ಬಿಜೆಪಿ ಹೊರಗಿನಿಂದ ಗೂಂಡಾಗಳನ್ನು ಕಳುಹಿಸುತ್ತಿದೆ ಎಂದು ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಧ್ಯಕ್ಷ ಅಭಿಜೀತ್ ದೀಪ್ಕೆ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಸ್ವತಃ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೇ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿ, ಅಪಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೀಪ್ಕೆ ದೂರಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ, ಪ್ರತಿಭಟನೆ ಒಂದು ತಿಂಗಳಿನಿಂದ ನಡೆಯುತ್ತಿದ್ದು, ಅಂತಹ ಯಾವುದೇ ಘಟನೆ ನಡೆದಿಲ್ಲ. ಆದರೆ ಈಗ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜನರನ್ನು ಪ್ರಚೋದಿಸಲು ಬಿಜೆಪಿಯವರು ಹೊರಗಿನಿಂದ ಗೂಂಡಾಗಳನ್ನು ಕಳುಹಿಸುತ್ತಿದ್ದಾರೆ ಎಂದು ಹೇಳಿದರು.

Abhijeet Dipke
'ಕಾಕ್ರೋಚ್​'ಗಳ ಮೇಲೆ ಲಾಠಿ ಚಾರ್ಜ್: ವಿಡಿಯೋ ನೋಡಲು ಟೈಮ್ ಇಲ್ಲ- ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಕಲ್ಲು ತೂರಾಟ ನಮ್ಮ ಕಡೆಯಿಂದ ನಡೆದಿಲ್ಲ. ಬಿಜೆಪಿಯ ಗೂಂಡಾಗಳು ಈ ಕೃತ್ಯ ಎಸಗುತ್ತಿದ್ದಾರೆ. ಪೊಲೀಸರು ಕಲ್ಲುಗಳನ್ನು ತುಂಬಿರುವ ಟ್ರಕ್‌ಗಳನ್ನು ತರುತ್ತಿದ್ದಾರೆ. ಬಿಜೆಪಿಯ ಗೂಂಡಾಗಳು ಬಂದು ಕಲ್ಲು ತೂರಾಟ ನಡೆಸಿ, ನಂತರ ಸಿಜೆಪಿ ಕಾರ್ಯಕರ್ತರ ಹೆಸರನ್ನು ಕೆಡಿಸುತ್ತಿದ್ದಾರೆ ಎಂದು ದೂರಿದರು.

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರೊಂದಿಗಿನ ಮಾತುಕತೆಯ ಕುರಿತು ಮಾತನಾಡಿದ ದೀಪ್ಕೆ, ಜೆ.ಪಿ. ನಡ್ಡಾ ಅವರೊಂದಿಗಿನ ನಮ್ಮ ಕಳೆದ ಸಭೆಯ ನಂತರ ನಮ್ಮ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಸರ್ಕಾರದೊಂದಿಗೆ ಇನ್ಮುಂದೆ ಯಾವುದೇ ರೀತಿಯ ಮಾತುಕತೆ ನಡೆದರೂ ಅದು ಕೇವಲ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲೇ ನಡೆಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು

ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ಲಾಠಿ ಚಾರ್ಜ್ 'ಅತ್ಯಂತ ಕ್ರೂರ' ಎಂದು ಟೀಕಿಸಿದ ದೀಪ್ಕೆ, ಲಾಠಿ ಚಾರ್ಜ್ ನಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳನ್ನು ನಾವು ನ್ಯಾಯಾಲಯಕ್ಕೆ ಎಳೆಯುತ್ತೇವೆ ಎಂದರು ಪ್ರತಿಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com