Gujarat Floods: ಮಳೆಯ ಆರ್ಭಟಕ್ಕೆ ಗುಜರಾತ್ ತತ್ತರ! ವಲ್ಸಾಡ್ ಜಲಾವೃತ, ಜನಜೀವನ ಅಸ್ತವ್ಯಸ್ತ, Video

ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ.
Gujarat Floods
ಗುಜರಾತ್ ಪ್ರವಾಹದಲ್ಲಿ ಮುಳುಗಿದ ವಾಹನಗಳು
Updated on

ಅಹ್ಮದಾಬಾದ್: ಗುಜರಾತ್‌ನಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ನಿರಂತರ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು.. ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಹವಾಮಾನ ಇಲಾಖೆ ಇನ್ನೂ ಹೆಚ್ಚಿನ ಮಳೆಯ ಎಚ್ಚರಿಕೆ ನೀಡಿದೆ.

ಗುಜರಾತ್‌ನ ವಲ್ಸಾಡ್ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆ ನೀರು ರಸ್ತೆಗಳನ್ನೇ ನದಿಗಳನ್ನಾಗಿ ಪರಿವರ್ತಿಸಿದ್ದು, ಹಲವು ವಸತಿ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ. ಗುಜರಾತ್‌ನ ವಲ್ಸಾಡ್ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.ಮಳೆ ನೀರು ರಸ್ತೆಗಳನ್ನೇ ನದಿಗಳನ್ನಾಗಿ ಪರಿವರ್ತಿಸಿದ್ದು, ಹಲವು ವಸತಿ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

Gujarat Floods
ಮತ್ತೆ ಕೈಕೊಟ್ಟ ಮುಂಗಾರು: ಜೂನ್‌ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...

ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ರಾಜ್ಯ ವಿಪತ್ತು ನಿರ್ವಹಣಾ ಪಡೆ, ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ಆಡಳಿತ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ದೋಣಿಗಳ ಮೂಲಕ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳನ್ನು ಮೊದಲ ಆದ್ಯತೆಯಾಗಿ ರಕ್ಷಿಸಲಾಗುತ್ತಿದೆ.

ನಿರಂತರ ಮಳೆಯಿಂದ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲ ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ಹಾಗೂ ದೂರವಾಣಿ ಸೇವೆಗಳ ಮೇಲೂ ಪರಿಣಾಮ ಬಿದ್ದಿದೆ.

ಮತ್ತಷ್ಟು ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಮುಂದಿನ 24ರಿಂದ 48 ಗಂಟೆಗಳ ಕಾಲ ಗುಜರಾತ್‌ನ ದಕ್ಷಿಣ ಭಾಗದಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ವಲ್ಸಾಡ್ ಸೇರಿದಂತೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದ್ದು, ಜನರು ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ.

ಇನ್ನು ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಆಹಾರ, ಕುಡಿಯುವ ನೀರು ಹಾಗೂ ಅಗತ್ಯ ವಸ್ತುಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತಿದೆ.

ವಲ್ಸಾಡ್‌ನಲ್ಲಿ ಮಳೆಯ ಆರ್ಭಟ ಮುಂದುವರಿದಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಕ್ಷಣಾ ತಂಡಗಳು ಕೂಡ ಹೈ ಅಲರ್ಟ್‌ನಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com