'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ

ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
PM Narendra Modi
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ವಿಶೇಷ ಫಾಸ್ಟ್‌-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವುದಾಗಿ ಇಂದು ಗುರುವಾರ ಘೋಷಿಸಿದ್ದಾರೆ.

ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಈ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳ ಈ ಘೋಷಣೆ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ವಿದ್ಯಾರ್ಥಿಗಳು ಕಾಕ್ರೋಚ್ ಜನತಾ ಪಾರ್ಟಿಯ ನೇತೃತ್ವದಲ್ಲಿ ನಡೆಸುತ್ತಿರುವ ದೀರ್ಘಕಾಲದ ಪ್ರತಿಭಟನೆಯ ನಡುವೆಯೇ ಹೊರಬಿದ್ದಿದೆ.

PM Narendra Modi
ಪ್ರತಿಭಟನೆ ವೇಳೆ ಹೈಡ್ರಾಮಾ; Dhurandhar ನಟಿ ಪೊಲೀಸರ ವಶಕ್ಕೆ; ರಸ್ತೆಯಲ್ಲಿ ನಿಂತಿದ್ದಕ್ಕೆ ಕರೆದೊಯ್ದರು ಎಂದು ಆಯೇಷಾ ಖಾನ್ ಆರೋಪ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com