ಆಗಸ್ಟ್ 3ರಂದು ಬೆಂಗಳೂರಿಗೆ ತಮಿಳುನಾಡು CM ವಿಜಯ್; ಡಿ.ಕೆ ಶಿವಕುಮಾರ್ ಜೊತೆ ಹೈವೋಲ್ಟೇಜ್ ಮೀಟಿಂಗ್; Video

ಈ ಬೆಳವಣಿಗೆಯನ್ನು ದೃಢಪಡಿಸಿರುವ ತಮಿಳುನಾಡು ಕೃಷಿ ಸಚಿವ ಆರ್. ವಿನೋತ್, ಆಗಸ್ಟ್ 3ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಿ, ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Tamil Nadu CM Vijay
ತಮಿಳು ನಾಡು ಸಿಎಂ ವಿಜಯ್
Updated on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3ರಂದು ಬೆಂಗಳೂರಿಗೆ ಭೇಟಿ ನೀಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾವೇರಿ ನೀರಿನ ಹಂಚಿಕೆ ಮತ್ತು ಮೇಕೆದಾಟು ಯೋಜನೆ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಈ ಬೆಳವಣಿಗೆಯನ್ನು ದೃಢಪಡಿಸಿರುವ ತಮಿಳುನಾಡು ಕೃಷಿ ಸಚಿವ ಆರ್. ವಿನೋದ್, ಆಗಸ್ಟ್ 3ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಿ, ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ತಮಿಳುನಾಡು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂಬ ತನ್ನ ನಿಲುವನ್ನು ಸಚಿವರು ಪುನರುಚ್ಚರಿಸಿದ್ದಾರೆ.

ಚರ್ಚೆಯ ಪ್ರಮುಖ ವಿಷಯಗಳು

ಕಾವೇರಿ ನೀರಿನ ಹಂಚಿಕೆ, ವಿಶೇಷವಾಗಿ ಕಾವೇರಿ ತೀರ ಪ್ರದೇಶದ ನೀರಾವರಿಗಾಗಿ ಕರ್ನಾಟಕದಿಂದ ನೀರು ಬಿಡುಗಡೆ ಮಾಡುವ ವೇಳಾಪಟ್ಟಿ ಕುರಿತು ಉಭಯ ರಾಜ್ಯಗಳ ನಡುವೆ ಚರ್ಚೆ ನಡೆಯಲಿದೆ.

ಮೇಕೆದಾಟು ಯೋಜನೆ
ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ತಮಿಳುನಾಡು ತನ್ನ ತೀವ್ರ ವಿರೋಧವನ್ನು ಮುಂದುವರಿಸಿದ್ದು, ಈ ಯೋಜನೆಗೆ ಯಾವುದೇ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ತಮಿಳುನಾಡು ವಿಧಾನಸಭೆ ಇತ್ತೀಚೆಗೆ ನಿರ್ಣಯವನ್ನೂ ಅಂಗೀಕರಿಸಿದೆ.

ಹಲವು ವರ್ಷಗಳ ಬಳಿಕ ಕಾವೇರಿ ವಿವಾದದ ಕುರಿತು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಟ್ಟದಲ್ಲಿ ನಡೆಯಲಿರುವ ಮೊದಲ ಅಧಿಕೃತ ಮಾತುಕತೆ ಇದಾಗಿದೆ. ಈ ಹಿಂದೆ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಮಾತುಕತೆಯಿಂದ ಯಾವುದೇ ಪ್ರಯೋಜನವಿಲ್ಲ; ಕಾನೂನು ಹೋರಾಟದ ಮೂಲಕವೇ ತಮಿಳುನಾಡಿಗೆ ನ್ಯಾಯ ಸಿಗಲಿದೆ ಎಂಬ ನಿಲುವು ತಾಳಿತ್ತು.

ಈ ಸಭೆ ಮಹತ್ವ ಪಡೆದುಕೊಂಡಿದ್ದು, ಕಾವೇರಿ ನೀರಿನಲ್ಲಿ ತಮಿಳುನಾಡಿನ ಪಾಲಿನ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಪದೇ ಪದೇ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ತೀರ ಭಾಗದ ರೈತರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

Tamil Nadu CM Vijay
ಕಾವೇರಿ ಜಲ ವಿವಾದ: ಸಿಎಂ ಡಿ.ಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ನಡುವೆ ಆಗಸ್ಟ್ 3ಕ್ಕೆ ಬೆಂಗಳೂರಿನಲ್ಲಿ ಸಭೆ ನಿಗದಿ?

ಎರಡು ದಿನಗಳ ಹಿಂದೆ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲೂ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ತಿಳಿಸಿತ್ತು. ಆದರೆ, ನೀರಾವರಿಗಾಗಿ ಕಾವೇರಿ ನೀರನ್ನೇ ಅವಲಂಬಿಸಿರುವ ರೈತರ ಸಂಕಷ್ಟವನ್ನು ಉಲ್ಲೇಖಿಸಿ ತಮಿಳುನಾಡು ಅಧಿಕಾರಿಗಳು ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು.

ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT)ಯ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಕರ್ನಾಟಕವು ಜೂನ್ ತಿಂಗಳಲ್ಲಿ 9.91 ಟಿಎಂಸಿ ಅಡಿ ಹಾಗೂ ಜುಲೈನಲ್ಲಿ 31.24 ಟಿಎಂಸಿ ಅಡಿ, ಒಟ್ಟು 41.15 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಹರಿಸಬೇಕಾಗಿದೆ.

ಜೂನ್ 1ರಿಂದ ಇದುವರೆಗೆ 31.07 ಟಿಎಂಸಿ ಅಡಿ ನೀರು ಹರಿಸಬೇಕಿದ್ದರೂ, ಕಳೆದ 50 ದಿನಗಳಲ್ಲಿ ಕರ್ನಾಟಕ ಕೇವಲ 3.44 ಟಿಎಂಸಿ ಅಡಿ ನೀರನ್ನು ಮಾತ್ರ ಬಿಡುಗಡೆ ಮಾಡಿದ್ದು, 28.63 ಟಿಎಂಸಿ ಅಡಿ ಕೊರತೆ ಉಂಟಾಗಿದೆ ಎಂದು ತಮಿಳುನಾಡು ವಾದಿಸಿದೆ.

ಆಗಸ್ಟ್ ತಿಂಗಳಲ್ಲಿ ಕರ್ನಾಟಕವು 45.95 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿದೆ ಎಂದು ತಮಿಳುನಾಡು ಹೇಳಿದೆ.

ಮೆಟ್ಟೂರು ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಕಾರಣ, ಜೂನ್ 12ರಂದು ನೀರಾವರಿಗಾಗಿ ನೀರು ಬಿಡಲಾಗದ ಹಿನ್ನೆಲೆಯಲ್ಲಿ ಹಾಗೂ ಅಂತರ್ಜಲ ಮಟ್ಟ ಕುಸಿದಿರುವುದರಿಂದ, ಕಾವೇರಿ ಡೆಲ್ಟಾ ಭಾಗದಲ್ಲಿ ಕುರವೈ ಬೆಳೆಗಳು ಒಣಗಲಾರಂಭಿಸಿವೆ. ಡೆಲ್ಟಾ ಪ್ರದೇಶದ ಬಹುತೇಕ ಭಾಗಗಳು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com