"ಜಂತರ್ ಮಂತರ್‌ನಿಂದ ದೂರವಿರಿ": ವಿದ್ಯಾರ್ಥಿಗಳಿಗೆ Delhi University ಸೂಚನೆ; ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ? ರಾಹುಲ್ ಗಾಂಧಿ ಆಕ್ರೋಶ..!

ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗಷ್ಟು ಧೈರ್ಯ? ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಇದಕ್ಕೆ ಹೊಣೆಗಾರರಾಗಬೇಕಾಗುತ್ತದೆ.
Rahul gandhi
ರಾಹುಲ್ ಗಾಂಧಿ
Updated on

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ದೆಹಲಿ ವಿಶ್ವವಿದ್ಯಾಲಯ (Delhi University) ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ವಿವಿ ವಿರುದ್ಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವೇ ಬೆದರಿಕೆ ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X)ನಲ್ಲಿ ದೆಹಲಿ ವಿಶ್ವವಿದ್ಯಾಲಯದ ಸೂಚನೆಯ ಪ್ರತಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗಷ್ಟು ಧೈರ್ಯ? ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಇದಕ್ಕೆ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಹುಲ್ ಗಾಂಧಿಯ ಈ ಪ್ರತಿಕ್ರಿಯೆಗೂ ಮುನ್ನ ಗುರುವಾರ ರಾತ್ರಿ ದೆಹಲಿ ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಿತ್ತು. ಜಂತರ್ ಮಂತರ್‌ನಲ್ಲಿ ನಡೆಯುವ ಯಾವುದೇ ಕಾನೂನುಬಾಹಿರ ಸಭೆ ಅಥವಾ ಪ್ರತಿಭಟನೆಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ವ್ಯಾಪ್ತಿಗೆ ಬರುತ್ತವೆ. ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ವಿಶ್ವವಿದ್ಯಾಲಯ ಎಚ್ಚರಿಕೆ ನೀಡಿತ್ತು.

Rahul gandhi
Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಅಲ್ಲದೆ, ಇಂತಹ ಪ್ರತಿಭಟನೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಜೊತೆಗೆ ಅವರ ಶೈಕ್ಷಣಿಕ ಪ್ರಗತಿ ಹಾಗೂ ಭವಿಷ್ಯದ ವೃತ್ತಿಜೀವನದ ಮೇಲೂ ಪ್ರತಿಕೂಲ ಪರಿಣಾಮ ಬೀರಬಹುದು.

ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಕಾನೂನು ಪಾಲನೆ ಮಾಡಬೇಕು. ಆದ್ದರಿಂದ ಜಂತರ್ ಮಂತರ್ ಪ್ರದೇಶದಿಂದ ದೂರವಿರಬೇಕು" ಎಂದು ಡಿಯು ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿತ್ತು. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದೂ ಸೂಚಿಸಿತ್ತು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಕಳೆದ ಜೂನ್ 20ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com