ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.
 Ravneet Singh Bittu
ರವನೀತ್ ಸಿಂಗ್ ಬಿಟ್ಟು
Updated on

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.

"ಭಾರತದ ಸಂವಿಧಾನದ 75ನೇ ವಿಧಿಯಡಿ ಪ್ರಧಾನ ಮಂತ್ರಿಯವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗನಾದ ಬಿಟ್ಟು 2024 ರಲ್ಲಿ ಬಿಜೆಪಿ ಸೇರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು. ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರವನೀತ್‌ ಸಿಂಗ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 Ravneet Singh Bittu
George Kurian: ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ; ರಾಷ್ಟ್ರಪತಿಗಳಿಂದ ಅಂಗೀಕಾರ

ಆಮ್ ಆದ್ಮಿ ಪಕ್ಷ (ಎಎಪಿ) ಹಿಡಿತದಲ್ಲಿರುವ ಗಡಿ ರಾಜ್ಯದಲ್ಲಿ ಮುಂದಿನ ವರ್ಷ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಅಡಿಪಾಯ ಹಾಕುವಲ್ಲಿ ಅವರು ನಿಕಟವಾಗಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com