Democracy Wins! ಪ್ರಧಾನ್ ರಾಜಿನಾಮೆ ಬಳಿಕ ಸಿಜೆಪಿ ಮೊದಲ ಪ್ರತಿಕ್ರಿಯೆ; ಜಂತರ್ ಮಂತರ್ ನಲ್ಲಿ ವಿಜಯೋತ್ಸವ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಘೋಷಣೆ ಮಾಡಿದ್ದಾರೆ.
CJP's first Reaction After Dharmedra Pradhan's Resignation
ಜಂತರ್ ಮಂತರ್ ನಲ್ಲಿ ಸಿಜೆಪಿ ವಿಜಯೋತ್ಸವ
Updated on

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ಅತ್ತ ದೆಹಲಿಯ ಜಂತರ್ ಮಂತರ್ ಕ್ರೀಡಾಂಣದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಿದ್ದಾರೆ.

ಹೌದು.. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಘೋಷಣೆ ಮಾಡಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಜಂತರ್ ಮಂತರ್ ನಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿರುವ ವಿದ್ಯಾರ್ಥಿಗಳು ವಿಜೋಯತ್ಸವ ಆಚರಿಸುತ್ತಿದ್ದು, ಹರ್ಷೋದ್ಧಾರಗಳ ಕೂಗುತ್ತಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಶನಿವಾರ ಇದನ್ನು ದೇಶದ ವಿದ್ಯಾರ್ಥಿ ಚಳವಳಿಯ ಐತಿಹಾಸಿಕ ವಿಜಯ ಎಂದು ಘೋಷಿಸಿದೆ.

ರಾಜೀನಾಮೆ ಘೋಷಣೆಯಾದ ತಕ್ಷಣ ಜಂತರ್ ಮಂತರ್‌ನಲ್ಲಿ ಸೇರಿದ್ದ ಬೆಂಬಲಿಗರು ಘೋಷಣೆಗಳನ್ನು ಕೂಗಿ, ಚಪ್ಪಾಳೆ ತಟ್ಟಿ ಸಂಭ್ರಮಾಚರಣೆ ನಡೆಸಿದರು. ಇದನ್ನು ದೇಶದ ವಿದ್ಯಾರ್ಥಿಗಳ ಹೋರಾಟದ ಮಹತ್ವದ ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ವಿರುದ್ಧ ಆರಂಭವಾದ ಈ ಪ್ರತಿಭಟನೆ, ನಂತರ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಒತ್ತಾಯಿಸುವ ರಾಷ್ಟ್ರವ್ಯಾಪಿ ಚಳವಳಿಯಾಗಿ ವಿಸ್ತರಿಸಿತು.

CJP's first Reaction After Dharmedra Pradhan's Resignation
NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ; ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?

ಹೋರಾಟ ಮುಂದುವರಿಕೆ

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯೇ ತಮ್ಮ ಪ್ರಮುಖ ಬೇಡಿಕೆ ಎಂದು ಸಿಜೆಪಿ ಆರಂಭದಿಂದಲೇ ಸ್ಪಷ್ಟಪಡಿಸಿತ್ತು. ಆ ಬೇಡಿಕೆ ಈಡೇರುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಪಕ್ಷ ಘೋಷಿಸಿತ್ತು. ಇದನ್ನು ಐತಿಹಾಸಿಕ ಗೆಲುವು ಎಂದು ಸಂಭ್ರಮಿಸಿದರೂ, ಸಚಿವರ ರಾಜೀನಾಮೆಯೊಂದಿಗೆ ಹೋರಾಟ ಅಂತ್ಯಗೊಳ್ಳುವುದಿಲ್ಲ ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ, ಅಕ್ರಮಗಳಿಂದ ಹಾನಿಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕೆಂದು ಸಿಜೆಪಿ ಮುಂದೆಯೂ ಒತ್ತಾಯಿಸುವುದಾಗಿ ತಿಳಿಸಿದೆ.

ಇನ್ನು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸರ್ಕಾರಕ್ಕೆ ಮಹತ್ವದ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದೆ. ಯುವಜನರ ನೇತೃತ್ವದಲ್ಲಿ ನಡೆದ ಈ ಚಳವಳಿ ಇತ್ತೀಚಿನ ವರ್ಷಗಳಲ್ಲಿ ದೇಶ ಕಂಡ ಅತಿದೊಡ್ಡ ವಿದ್ಯಾರ್ಥಿ ಹೋರಾಟಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com