ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Video

ದಶಕಗಳಿಂದ ನಡೆಯುತ್ತಿರುವ ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕೆಂದು Gen Z ಸೇರಿದಂತೆ ಭಾರತೀಯರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
CJP Protest
ಸಿಜೆಪಿ ಪ್ರತಿಭಟನೆ
Updated on

ನವದೆಹಲಿ: ಭಾರತದಲ್ಲಿ ಇತ್ತೀಚೆಗೆ ನಡೆದ ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ ವ್ಯಕ್ತಪಡಿಸಿವೆ ಎಂಬ ವರದಿಗಳಿಗೆ ವಿದೇಶಾಂಗ ಸಚಿವಾಲಯ (MEA) ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿದೆ.

ದಶಕಗಳಿಂದ ನಡೆಯುತ್ತಿರುವ ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕೆಂದು Gen Z ಸೇರಿದಂತೆ ಭಾರತೀಯರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಪಾಕಿಸ್ತಾನ ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಜೈಸ್ವಾಲ್, ಹಲವು ದಶಕಗಳಿಂದ ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆ ದಾಖಲೆಯ ಬಗ್ಗೆ ಭಾರತಕ್ಕೆ ಸಂಪೂರ್ಣವಾಗಿ ತಿಳಿದಿದೆ. ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕೆಂದು Gen Z ಸೇರಿದಂತೆ ಭಾರತೀಯರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ.ಪಾಕಿಸ್ತಾನ ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಯುವಜನತೆ ನಡೆಸಿದ ಪ್ರತಿಭಟನೆಗಳ ಬಗ್ಗೆ ರಾಜಕೀಯ ನಾಯಕರ ಟೀಕೆಗಳು ಹೆಚ್ಚಾಗುತ್ತಿರುವಂತೆಯೇ ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ನಡೆಯುತ್ತಿರುವ ಶಾಸಕಾಂಗ ಚುನಾವಣೆಗಳ ಬಗ್ಗೆ ಭಾರತ ಮತ್ತೆ ಟೀಕಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ.

CJP Protest
Watch | ಇಂಥ ಅಸಹ್ಯ ಎಲ್ಲೂ ನೋಡಿಲ್ಲ; ಸಿಜೆಪಿ ಪ್ರತಿಭಟನೆ ಬಗ್ಗೆ ಕಂಗನಾ ರಣಾವತ್

ಪಾಕ್ ಆಕ್ರಮಿತ ಪ್ರದೇಶಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬುದು ಭಾರತದ ಸ್ಪಷ್ಪ ನಿಲುವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com