Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷ ಓಂ ಬಿರ್ಲಾ, ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.
Lok Sabha
ಲೋಕಸಭೆ
Updated on

ನವದೆಹಲಿ: ಮುಂಗಾರು ಅಧಿವೇಶನದ ಏಳನೇ ದಿನವೂ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯಿಂದ ಕಲಾಪ ಗದ್ದಲದ ನಡುವೆಯೇ ಆರಂಭವಾಯಿತು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರಮದ ಕುರಿತು ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದ ಹಿನ್ನೆಲೆಯಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷ ಓಂ ಬಿರ್ಲಾ, ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.

ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಪರೀಕ್ಷೆಗಳ (ಪ್ರಶ್ನೆಪತ್ರಿಕೆ ಸೋರಿಕೆ ತಡೆ) ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಆದರೆ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಇನ್ನೊಂದೆಡೆ, ರಾಜ್ಯಸಭೆಯಲ್ಲಿಯೂ ಪ್ರತಿಪಕ್ಷ ಸದಸ್ಯರು ಜುಲೈ 20ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದ್ದ ಪೊಲೀಸ್ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

Lok Sabha
ಸ್ಪೀಕರ್ ಮಧ್ಯಸ್ಥಿಕೆ ಬಳಿಕ ಪಕ್ಷಗಳ ಒಪ್ಪಿಗೆ: 'ಪ್ರಶ್ನೆ ಪತ್ರಿಕೆ ಸೋರಿಕೆ ತಡೆ' ಮಸೂದೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆ ಸಾಧ್ಯತೆ!

ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಸಭಾಪತಿ ರಾಧಾಕೃಷ್ಣನ್ ಅವರು, ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಈ ನಡುವೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ಕುರಿತು ತುರ್ತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಸಂಸದರು ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದರು.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ರಂದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಸಯ್ಯದ್ ನಾಸೀರ್ ಹುಸೇನ್ ಅವರು ನಿಯಮ 267ರಡಿ ನೋಟಿಸ್ ನೀಡಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹಾಗೂ ಚಂಡೀಗಢ ಸಂಸದ ಮನೀಶ್ ತಿವಾರಿ, ನಿಗದಿತ ಕಾರ್ಯಸೂಚಿಯನ್ನು ಸ್ಥಗಿತಗೊಳಿಸಿ, ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಮುಂದೂಡಿಕೆ ನೋಟಿಸ್ ಸಲ್ಲಿಸಿದರು.

ಮಧ್ಯಾಹ್ನ ನಡೆಯಲಿರುವ ಚರ್ಚೆಯಲ್ಲಿ ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಗೌರವ್ ಗೊಗೊಯ್ ಹಾಗೂ ಕೆ.ಸಿ. ವೇಣುಗೋಪಾಲ್ ಮಾತನಾಡುವ ಸಾಧ್ಯತೆ ಇದೆ.

ಇದರ ಜೊತೆಗೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಕೂಡ ಚರ್ಚೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com