

ನವದೆಹಲಿ: ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ವಿಪಕ್ಷಗಳ ಗದ್ದಲದ ನಡುವೆ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ತನ್ನ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿತು.
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದು ಇದಕ್ಕೆ ಉತ್ತರ ನೀಡಬೇಕೆಂದು ವಿಪಕ್ಷಗಳ ಆಗ್ರಹಿಸಿದವು. ಪ್ರತಿಭಟನೆಗಳು ನಡುವೆಯೇ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿನ ತಿದ್ದುಪಡಿಗಳು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತವೆ ಎಂದು ಹೇಳಿದರು.
ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ಅನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಮತ್ತು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆಯನ್ನು ಬಲಪಡಿಸಲು ಬದ್ಧವಾಗಿದೆ ಎಂದು ಹೇಳಿದರು.