ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಬಡ್ಗಾಮ್ ನಿವಾಸಿ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಖುರೇಷಿ ಅವರನ್ನು ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದಾಗ ಅನಂತ್‌ನಾಗ್‌ನಲ್ಲಿ ಗುಂಡಿಕ್ಕಿ ಕೊಂದ ವಾರಗಳ ನಂತರ ಈ ದಾಳಿ ನಡೆದಿದೆ.
Image used for representational purpose only
ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ (ಸಾಂಕೇತಿಕ ಚಿತ್ರ)online desk
Updated on

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಿಲಾಮ್ ಗ್ರಾಮದಲ್ಲಿ ಶುಕ್ರವಾರ ಭಯೋತ್ಪಾದಕರು ಇಬ್ಬರು ವಲಸಿಗ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಪರಿಣಾಮ ಓರ್ವ ವಲಸಿಗ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಕಾರ್ಮಿಕ ಚತ್ತೀಸ್ ಗಢದ ಮೂಲದವರು ಎಂದು ತಿಳಿದುಬಂದಿದೆ

ಸಂತ್ರಸ್ತರ ಗುರುತುಗಳು ಸೇರಿದಂತೆ ಹೆಚ್ಚಿನ ವಿವರಗಳನ್ನು ಪೊಲೀಸರು ಇನ್ನೂ ಹಂಚಿಕೊಂಡಿಲ್ಲ. ವಿಶೇಷ ಕಾರ್ಯಾಚರಣೆ ಗುಂಪಿಗೆ ಸೇರಿದಬಡ್ಗಾಮ್ ನಿವಾಸಿ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಖುರೇಷಿ ಅವರನ್ನು ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದಾಗ ಅನಂತ್‌ನಾಗ್‌ನಲ್ಲಿ ಗುಂಡಿಕ್ಕಿ ಕೊಂದ ವಾರಗಳ ನಂತರ ಈ ದಾಳಿ ನಡೆದಿದೆ.ಕಳೆದ ವರ್ಷದ ಪಹಲ್ಗಾಮ್ ದಾಳಿಯ ನಂತರ ಕಣಿವೆಯಲ್ಲಿ ನಡೆದ ಮೊದಲ ಭಯೋತ್ಪಾದಕ ದಾಳಿ ಇದಾಗಿದೆ.

Image used for representational purpose only
ಕಾಶ್ಮೀರ CM ಒಮರ್ ಅಬ್ದುಲ್ಲಾಗೆ ಕೊನೆಗೂ ಸಿಕ್ತು ಪತ್ನಿ ಪಾಯಲ್​ರಿಂದ ವಿಚ್ಛೇದನ!

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶುಕ್ರವಾರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿದ್ದಾರೆ.

"ಕುಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯಲ್ಲಿ ಛತ್ತೀಸ್‌ಗಢದ ಕಾರ್ಮಿಕನೊಬ್ಬ ಸಾವನ್ನಪ್ಪಿದ ನಂತರ ನಾನು ಡಿಜಿಪಿ ನಳಿನ್ ಪ್ರಭಾತ್ ಮತ್ತು ಉನ್ನತ ಭದ್ರತಾ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಈ ಹೇಡಿತನದ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಮತ್ತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಾನು ನಿರ್ದೇಶಿಸಿದ್ದೇನೆ" ಎಂದು ಲೆಫ್ಟಿನೆಂಟ್ ಗವರ್ನರ್ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಅಪರಾಧಿಗಳನ್ನು ನ್ಯಾಯಕ್ಕೆ ತರಲು ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು. "ಛತ್ತೀಸ್‌ಗಢದ ಮತ್ತೊಬ್ಬ ಗಾಯಗೊಂಡ ಕಾರ್ಮಿಕನನ್ನು ತುರ್ತು ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತ ಕುಟುಂಬಕ್ಕೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಜಮ್ಮು-ಕಾಶ್ಮೀರ ಆಡಳಿತ ಮತ್ತು ಇಡೀ ರಾಷ್ಟ್ರ ಕುಟುಂಬಗಳೊಂದಿಗೆ ನಿಂತಿದೆ" ಎಂದು ಸಿನ್ಹಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com