ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ. ನೆರವು

ಬಡ್ಡಿರಹಿತ ಈ ಆರ್ಥಿಕ ಬೆಂಬಲವು ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ ಬೆಲೆ ಸ್ಥಿರೀಕರಣವನ್ನು ಒದಗಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ತಿಳಿಸಿದೆ.
File photo
ವಿಮಾನ ಸೇವೆ (ಸಂಗ್ರಹ ಚಿತ್ರ)online desk
Updated on

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ನಿಭಾಯಿಸಲು ಕೇಂದ್ರ ಸರ್ಕಾರ, ವೈಮಾನಿಕ ಟರ್ಬೈನ್ ಇಂಧನ(ಎಟಿಎಫ್) ಬೆಲೆಗಳನ್ನು ಸ್ಥಿರಗೊಳಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಬುಧವಾರ 10,000 ಕೋಟಿ ರೂ.ಗಳ ಒಂದು ಬಾರಿಯ ಆರ್ಥಿಕ ಬೆಂಬಲವನ್ನು ಅನುಮೋದಿಸಿದೆ.

ಬಡ್ಡಿರಹಿತ ಈ ಆರ್ಥಿಕ ಬೆಂಬಲವು ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ ಬೆಲೆ ಸ್ಥಿರೀಕರಣವನ್ನು ಒದಗಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ತಿಳಿಸಿದೆ.

ಈ ನಿರ್ಧಾರವನ್ನು ಘೋಷಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಎಟಿಎಫ್‌ ಬೆಲೆಗಳ ಏರಿಕೆಯ ಹಿನ್ನೆಲೆಯಲ್ಲಿ ಈ ಬಜೆಟ್ ಬೆಂಬಲವು ವಿಮಾನಯಾನ ಸಂಸ್ಥೆಗಳಿಗೆ ಸಹಾಯ ಮಾಡುತ್ತದೆ ಮತ್ತು 2025 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನವು ವಾಯುಪ್ರದೇಶವನ್ನು ಮುಚ್ಚಿದ್ದರಿಂದಲೂ ಸಹ ನಷ್ಟ ಅನುಭವಿಸುತ್ತಿರುವ ವಿಮಾನಯಾನ ಸಂಸ್ಥೆಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

File photo
'ವಿಶ್ವಗುರು ಮೋದಿಯವರಿಗೆ ಯುದ್ಧ ನಿಲ್ಲಿಸಿ ಇಂಧನ ಬೆಲೆ ಇಳಿಕೆ ಮಾಡಲು ಏಕೆ ಆಗುತ್ತಿಲ್ಲ': ಸಚಿವ ಪ್ರಿಯಾಂಕ್ ಖರ್ಗೆ; Video

ಪ್ರ,ಸ್ತುತ ಅಮೆರಿ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಭಾರತೀಯ ವಿಮಾನಯಾನ ಸಂಸ್ಥೆಗಳು ತನ್ನ ಅಂತರರಾಷ್ಟ್ರೀಯ ಸೇವೆಗಳನ್ನು ಕಡಿತಗೊಳಿಸುವುದಾಗಿ ಮತ್ತು ಇಂಧನ ಬೆಲೆಗಳನ್ನು ಹೆಚ್ಚಿಸುವುದಾಗಿ ಘೋಷಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com